
Spread the love
ಬಿಜೆಪಿಗೆ ಆಯನೂರು ಮಂಜುನಾಥ್ ರಾಜೀನಾಮೆ
ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆ ಸಂಬಂಧ ಬಿಜೆಪಿಯಲ್ಲಿ ಬಂಡಾಯ ಜೋರಾಗಿದೆ. ಟಿಕೆಟ್ ಕೈತಪ್ಪಿದ್ದರಿಂದ ಒಬ್ಬೊಬ್ಬರೇ ಪ್ರಭಾವಿ ನಾಯಕರು ಬಿಜೆಪಿ ತೊರೆಯುತ್ತಿದ್ದಾರೆ. ಇದೀಗ ಶಿವಮೊಗ್ಗದ ಬಿಜೆಪಿ ನಾಯಕ ಆಯನೂರು ಮಂಜುನಾಥ್ವಿ ಧಾನಪರಿಷತ್ ಹಾಗೀ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಇನ್ನೂ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಆದರೂ ಟಿಕೆಟ್ ಸಿಗುವುದು ಖಾತ್ರಿ ಇಲ್ಲದಿರುವುದರಿಂದ ರಾಜೀನಾಮೆ ಘೋಷಿಸಿದ್ದಾರೆ.
Spread the love