Home Mangalorean News Kannada News ಬಿಜೆಪಿಯಿಂದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಉಚ್ಚಾಟನೆ

ಬಿಜೆಪಿಯಿಂದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಉಚ್ಚಾಟನೆ

Spread the love

ಬಿಜೆಪಿಯಿಂದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಉಚ್ಚಾಟನೆ

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆರು ವರ್ಷ  ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಮದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದುದರಿಂದ, ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.


Spread the love

Exit mobile version