ಬಿಜೆಪಿಯ ರೆಸಾರ್ಟ್ ರಾಜಕೀಯ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

Spread the love

ಬಿಜೆಪಿಯ ರೆಸಾರ್ಟ್ ರಾಜಕೀಯ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು : ರಾಜ್ಯದ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ ಬಿಜೆಪಿ ಆರಂಭಿಸಿರುವ ರೆಸಾರ್ಟ್ ರಾಜಕೀಯವನ್ನು ಖಂಡಿಸಿ ಗುರುವಾರ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಲ್ಲಿಕಟ್ಟೆಯಲ್ಲಿರುವ ಪಕ್ಷದ ಜಿಲ್ಲಾ ಕಚೇರಿಯ ಮುಂದೆ ಪ್ರತಿಭಟನೆ ನಡೆಯಿತು.

ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಜನತೆಯ ಆಶೋತ್ತರಗಳನ್ನು ಈಡೇರಿಸಲು ಅತ್ಯುತ್ತಮ ಯೋಜನೆಗಳ ಮೂಲಕ ಆಡಳಿತ ನಡೆಸುತ್ತಿವೆ. ಇದನ್ನು ಸಹಿಸದ ಬಿಜೆಪಿ ಅಧಿಕಾರದ ಲಾಲಾಸೆಗಾಗಿ ಶಾಸಕರನ್ನು ರೆಸಾರ್ಟ್‌ಗಳಲ್ಲಿ ಕೂಡಿಟ್ಟು ಸರಕಾರ ಉರುಳಿಸಲು ಪ್ರಯತ್ನಿಸುತ್ತಿದೆ. ಇದು ಎಂದಿಗೂ ಫಲಿಸದು ಎಂದರು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಯುವ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಮಿಥುನ್ ರೈ, ಕಾರ್ಪೊರೇಟರ್‌ಗಳಾದ ಪುರುಷೋತ್ತಮ ಚಿತ್ರಾಪುರ, ನವೀನ್ ಡಿಸೋಜ, ಸಬಿತಾ ಮಿಸ್ಕಿತ್ ಮತ್ತಿತರರು ಪಾಲ್ಗೊಂಡಿದ್ದರು.


Spread the love