ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣರಿಂದ ಭರ್ಜರಿ ರೋಡ್ ಶೋ

Spread the love

ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣರಿಂದ ಭರ್ಜರಿ ರೋಡ್ ಶೋ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಅವರು ಉಡುಪಿಯ ಸಂತೆಕಟ್ಟೆಯಲ್ಲಿ ಮಂಗಳವಾರ ಪಾದಯಾತ್ರೆ ನಡೆಸುವುದರ ಮೂಲಕ ಅದ್ದೂರಿ ರೋಡ್ ಶೋ ನಡೆಸಿದರು.

ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತಪ್ರಚಾರ ಸಲುವಾಗಿ ಮಲ್ಪೆ ಆಶೀರ್ವಾದ್ ಜಂಕ್ಷನ್ ನಿಂದ ಆರಂಭವಾದ ಪಾದಯಾತ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಸಂತೆಕಟ್ಟೆ ಜಂಕ್ಷನ್ ಬಳಿ ಸಮಾಪನಗೊಂಡಿತು.

ಪಾದಯಾತ್ರೆಯಲ್ಲಿ ಕೇಂದ್ರ ಸರಕಾರ ಕ್ಷೇತ್ರ ಮತ್ತು ಈಶಾನ್ಯ ರಾಜ್ಯಗಳ ಅಭಿವೃದ್ಧಿ ರಾಜ್ಯ ಖಾತೆ ಸಚಿವರಾದ ಬಿ.ಎಲ್ ವರ್ಮಾ, ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ ಶೆಟ್ಟಿ, ಉಡುಪಿ ಶಾಸಕ ರಘುಪತಿ ಭಟ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನಾಯಕರಾದ ಮಟ್ಟಾರ್ ರತ್ನಾಕರ ಹೆಗ್ಡೆ, ರಾಘವೇಂದ್ರ ಕಿಣಿ, ಯುವಮೋರ್ಚಾ ಕಾರ್ಯದರ್ಶಿ ಅಕ್ಷಿತ್ ಸುವರ್ಣ ಹಾಗೂ ಇತರರು ಉಪಸ್ಥಿತರಿದ್ದರು.


Spread the love