ಬಿಜೆಪಿ ಅಲ್ಪಸಂಖ್ಯಾತ ಕಾರ್ಯಕರ್ತರ ಸದಸ್ಯತ್ವ ಅಭಿಯಾನ ಉದ್ಘಾಟನೆ
ಮಂಗಳೂರು: ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕಾರಿಣಿಯು ಜಿಲ್ಲಾ ಬಿಜೆಪಿ ಕಚೇರಿ, ಮಂಗಳೂರಿನಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೋಯ್ಲಸ್ ಡಿ.ಸೋಜಾರವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲೆದಾದ್ಯಂತ ಬಿಜೆಪಿ ಅಲ್ಪಸಂಖ್ಯಾತ ಕಾರ್ಯಕರ್ತರ ಸದಸ್ಯತ್ವ ಅಭಿಯಾನವನ್ನು ಉದ್ಘಾಟಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ರಹೀಂ ಉಚ್ಚಿಲ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಜಮಾಲ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಬ್ರಿಜೇಶ್ ಚೌಟ, ಜಿಲ್ಲಾ ಕಾರ್ಯದರ್ಶಿ ಹಾಗೂ ಅಲ್ಪಸಂಖ್ಯಾತ ಮೋರ್ಚಾ ಪ್ರಭಾರಿಯಾದ ಸತೀಶ್ ಕುಂಪಲ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನಕಾರ್ಯದರ್ಶಿಗಳಾದ ಅಬ್ದುಲ್ ಅಜೀಜ್ ಫ್ಯಾನ್ಸಿ, ಕೆ.ಎ.ಮಹಮ್ಮದ್ ಮುನೀರ್, ಉಪಾಧ್ಯಕ್ಷರಾದ ಜೋಕಿಂ ಡಿ.ಕೋಸ್ತ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದ ನಿರೂಪಣೆಯನ್ನು ಜೋಕಿಂ ಡಿ.ಕೋಸ್ತ, ಸ್ವಾಗತವನ್ನು ಪ್ರ.ಕಾ ಮಹಮ್ಮದ್ ಮುನೀರ್, ಧನ್ಯವಾದವನ್ನು ಅಬ್ದುಲ್ ಅಜೀಜ್ ಫ್ಯಾನ್ಸಿರವರು ನೇರವೇರಿಸಿದರು.
            












