ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪದಾಧಿಕಾರಿಗಳಿಂದ ರಾಜೀನಾಮೆಯ ಎಚ್ಚರಿಕೆ

Spread the love

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪದಾಧಿಕಾರಿಗಳಿಂದ ರಾಜೀನಾಮೆಯ ಎಚ್ಚರಿಕೆ

ಮೈಸೂರು: ವಕ್ಫ್ ಬೋರ್ಡ್ ಗೆ ನೇಮಕವಾಗಿದ್ದ ಅಧ್ಯಕ್ಷರಿಗೆ ಯಾವುದೇ ರೀತಿಯ ಸೂಚನೆ ನೀಡದೆ ಸ್ಥಾನದಿಂದ ಕೆಳಗಿಳಿಸಿ ಕಾಂಗ್ರೆಸ್ ಕಾರ್ಯಕರ್ತನನ್ನು ನೇಮಕ ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿರುವ ಮೈಸೂರು ನಗರ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪದಾಧಿಕಾರಿಗಳು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಸಂಸದ ಪ್ರತಾಪ್ ಸಿಂಹ ಅವರಿಗೆ ಮನವಿ ಸಲ್ಲಿಸಿರುವ ನಗರ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪದಾಧಿಕಾರಿಗಳು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಮೈಸೂರಿನ ಬಿಜೆಪಿ ಜಿಲ್ಲಾ ಅಧ್ಯಕ್ಷ ಎಲಿಯಾಸ್ ಅಹಮದ್ ರವರು ವಕ್ಫ್ ಬೋರ್ಡ್ ಗೆ ಅಧ್ಯಕ್ಷರಾಗಿ ನೇಮಕವಾಗಿದ್ದರೂ ಯಾವುದೇ ಸೂಚನೆನೀಡದೆ ಮತ್ತೆ ಕಾಂಗ್ರೆಸ್ ಕಾರ್ಯಕರ್ತನನ್ನು ಹೊಸದಾಗಿ ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿರುವುದು ಖಂಡನೀಯ ನಮ್ಮ ಪಕ್ಷ ಅಧಿಕಾರದಲ್ಲಿದ್ದು ನಮ್ಮ ಪಕ್ಷದ ಅಭ್ಯರ್ಥಿ ಯನ್ನೇ ಅಧ್ಯಕ್ಷರನ್ನಾಗಿ ಮುಂದುವರಿಸಬೇಕು ಇಲ್ಲದಿದಲ್ಲಿ ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.

ಮನವಿ ಸಲ್ಲಿಸುವ ವೇಳೆ ಮೈಸೂರು ನಗರ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ನಗರ ಉಪಾಧ್ಯಕ್ಷ ಎಮ್. ಕೆ. ನಾಝಿರ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ಪಾಲ್, ನವೀದ್ ಅಹಮೇದ್, ಚಾಮುಂಡೇಶ್ವರಿ ಕ್ಷೇತ್ರ ನಗರ ಅಧ್ಯಕ್ಷ ಜೆ.ಸ್ಟೀಫನ್ ಸುಜಿತ್, ಚಾಮುಂಡೇಶ್ವರಿ ಕ್ಷೇತ್ರ ಗ್ರಾಮಾಂತರ ಅಧ್ಯಕ್ಷ ಹನೀಫ್ ಅಹಮದ್, ಚಾಮರಾಜಕ್ಷೇತ್ರ ಅಧ್ಯಕ್ಷ ತನ್ವೀರ ಅಹಮದ್, ಪ್ರಧಾನ ಕಾರ್ಯದರ್ಶಿ ತಬರೇಜ್, ಪ್ರಧಾನ ಕಾರ್ಯದರ್ಶಿ –ಇಮ್ರಾನ್, ಕೃಷ್ಣರಾಜ ಕ್ಷೇತ್ರದ ಮುಖಂಡರಾದ -ಉಸ್ಮಾನ್, ಎಜಾಜ್ ಜಿಲ್ಲಾ ಅಧ್ಯಕ್ಷರಾದ ಇಲಿಯಾಜ್ ಅಹಮದ್

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇರ್ಫಾನ್ ಅಹಮದ್ ಇದ್ದರು.


Spread the love