ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಖಂಡನೆ

Spread the love

ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಖಂಡನೆ

ಮಂಗಳೂರು: ಬಿಜೆಪಿ ಕಾರ್ಯಕರ್ತನಾದ ಜುಬೈರ್ ಅವರನ್ನು ದುಷ್ಕರ್ಮಿಗಳು ನಿನ್ನೆ ತಡರಾತ್ರಿ ಅಮಾನುಷವಾಗಿ ಹತ್ಯೆಗೈದಿರುವುದನ್ನು ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಜನಸಾಮಾನ್ಯರು ಭಯದ ವಾತಾವರಣದಲ್ಲೇ ಬದುಕಬೇಕಾದ ಪರಿಸ್ಥಿತಿಯಿದೆ. ಹೀಗಿರುವಾಗ ಬಿಜೆಪಿ ಕಾರ್ಯಕರ್ತನಾದ ಜುಬೈರ್ ಹತ್ಯೆಯ ಬಗ್ಗೆ ತನಿಖೆ ತೀವ್ರಗೊಳಿಸಿ, ಕೊಲೆಗೈದಿರುವ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಬೇಕು, ಇಲ್ಲದಿದ್ದಲ್ಲಿ ಜಿಲ್ಲೆಯಾದ್ಯಂತ ತೀವ್ರ ರೀತಿಯ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ದ.ಕ. ಜಿಲ್ಲಾಧ್ಯಕ್ಷ ಜೋಯ್ಲಸ್ ಡಿಸೋಜಾ ಎಚ್ಚರಿಸಿದ್ದಾರೆ.

ಅಕ್ಟೊಬರ್ 6ರಂದು ತೊಕ್ಕೋಟು ಜಂಕ್ಷನ್ ನಲ್ಲಿ ಸಂಜೆ 04.00 ಗಂಟೆಗೆ ಜಿಲ್ಲಾ ಅಲ್ಪ ಸಂಖ್ಯಾತ ಮೋರ್ಚಾವತಿಯಿಂದ ಪ್ರತಿಭಟನೆ ನಡೆಯಲಿರುವುದು ಎಂದು ತಿಳಿಸಿರುತ್ತಾರೆ.


Spread the love