ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ರಕ್ತದಾನ ಶಿಬಿರ 

Spread the love

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ರಕ್ತದಾನ ಶಿಬಿರ 

ಉಡುಪಿ: ಭಾರತೀಯ ಜನತಾ ಪಾರ್ಟಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಯಶಸ್ವೀ ಎರಡನೇ ಅವಧಿಯ ಎರಡನೇ ವರ್ಷ ತುಂಬಿದ ಪ್ರಯುಕ್ತ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಕೆಎಂಸಿ ಅಸ್ಪತ್ರೆ ಮಣಿಪಾಲ ಬ್ಲಡ್ ಬ್ಯಾಂಕ್ ನಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ ನಾಯಕ್ ನೆರವೇರಿಸಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ ಎಸ್. ಶೆಟ್ಟಿ,ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ. ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಅತ್ರಾಡಿ, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಕಾಪು ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸುಮಾ ಶೆಟ್ಟಿ , ಉಡುಪಿ ನಗರ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆಪತ್ಪಾಂಧವ ಸತೀಶ್ ಸಾಲ್ಯಾನ್, ಹಿಂದುಳಿದ ವರ್ಗಗಳ ಮೋರ್ಚಾದ ಉಡುಪಿ ನಗರ ಅಧ್ಯಕ್ಷರ ವಿನಯ ಕಲ್ಮಾಡಿ, ಬಿಜೆಪಿ ಉಡುಪಿ ನಗರ ಕಾರ್ಯದರ್ಶಿ ದಯಾಶಿನಿ, ಮಹಿಳಾ ಮೋರ್ಚಾ ಉಪಾಧ್ಯಕ್ಷರು, ಕಾರ್ಯದರ್ಶಿ, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.


Spread the love