
ಬಿಜೆಪಿ ಮುಖಂಡರ ಫೋಟೋಗೆ ಚಪ್ಪಲಿ ಹಾರ ಪ್ರಕರಣ: ಬಂಧಿತ ಆರೋಪಿಗಳಿಗೆ ಪೊಲೀಸ್ ದೌರ್ಜನ್ಯ ಆರೋಪ
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ವಿಚಾರದಲ್ಲಿ ಬ್ಯಾನರ್ ಹಾಕಿದ ಆರೋಪಿಗಳಿಗೆ ಪುತ್ತೂರು ಪೊಲೀಸರಿಂದ ದೌರ್ಜನ್ಯ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.ಸದ್ಯ ಬ್ಯಾನರ್ ಹಾಕಿದ ಆರೋಪದಲ್ಲಿ ಬಂಧನವಾಗಿದ್ದವರು ಹಲ್ಲೆಗೊಳಗಾದ ಫೋಟೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ಬಿಜೆಪಿಯ ಭದ್ರಕೋಟೆ ಎಂದು ಹೇಳಲಾಗುತ್ತಿದ್ದ ಪುತ್ತೂರಿನಲ್ಲಿ ಬಿಜೆಪಿಗೆ ಹೀನಾಯ ಸೋಲು ಉಂಟಾಗಿದ್ದು, ಇದಕ್ಕೆ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದಗೌಡ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಇಬ್ಬರ ಫೋಟೋಗಳನ್ನು ಶ್ರದ್ಧಾಂಜಲಿ ಎಂದು ಬ್ಯಾನರ್ನಲ್ಲಿ ಹಾಕಿಸಿ, ಚಪ್ಪಲಿ ಹಾರ ಹಾಕಲಾಗಿತ್ತು. ಈ ಘಟನೆ ಕುರಿತು ಬ್ಯಾನರ್ ಹಾಕಿದವರನ್ನು ಬಂಧಿಸಿದ ಸ್ಥಳೀಯ ಪೊಲೀಸರು ಮನಸೋ ಇಚ್ಛೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು ಇದರ ಫೊಟೋಗಳು ಹರಿದಾಡುತ್ತಿವೆ.
ಬಿಜೆಪಿ ಹಾಗೂ ನಗರಸಭೆ ನೀಡಿದ ದೂರಿನ್ವಯ ನರಿಮೊಗರು ಗ್ರಾಮದ ನಿವಾಸಿಗಳಾದ ವಿಶ್ವನಾಥ್, ಮಾಧವ, ಅಭಿ ಯಾನೆ ಅವಿನಾಶ್, ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಅವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದು ಈ ವೇಳೆ ಥಳಿಸಲಾಗಿದೆ ಎನ್ನುವ ಆರೋಪ ವ್ಯಕ್ತವಾಗಿದೆ.
ಥಳಿತದಿಂದ ಗಾಯಗೊಂಡ ಯುವಕರ ಚಿತ್ರಗಳು ಹಾಗೂ ತಡರಾತ್ರಿ ಪುತ್ತೂರು ಡಿವೈಎಸ್ ಪಿ ಕಚೇರಿಯಿಂದ ನಡೆದಾಡಲೂ ಕಷ್ಟ ಪಡುವ ರೀತಿಯಲ್ಲಿ ಹೆಜ್ಜೆ ಹಾಕುತ್ತಿರುವ ಯುವಕರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೋಟೊದಲ್ಲಿ ಬೆನ್ನು ಸೊಂಟದ ಹಿಂಭಾಗದಲ್ಲಿ ಥಳಿಸಿರುವುದು ಕಾಣುತ್ತಿದೆ.
ಬಂಧಿತರು ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನಲಾಗಿದ್ದು ಅದರಲ್ಲಿ ಕೆಲವರು ಈ ಬಾರಿ ಪಕ್ಷೇತರ ಅಭ್ಯರ್ಥಿಯ ಪರ ಪ್ರಚಾರಕ್ಕೆ ಹೋಗಿದ್ದರು. ಉಳಿದವರು ಬಿಜೆಪಿಯ ಪರವೇ ಪ್ರಚಾರ ನಡೆಸಿದ್ದರು ಎನ್ನಲಾಗಿದೆ. ಜಿಲ್ಲೆ, ರಾಜ್ಯದ ಕೆಲ ಪ್ರಭಾವಿಗಳ ಒತ್ತಡದಿಂದ ಬಂಧನದ ನೆಪದಲ್ಲಿ ದೌರ್ಜನ್ಯ ನಡೆಸಲಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
MODALU CHAPPALI HARA HAKIDDU TAPPU NANTARA POLICE RAVARIGE YI ADIKARA KOTTAVARARU. IDANNU BERE PAKSHADAVARE YAKE MDISIRABARADU. ADARA BAGGE YOCHANE MADABEKU. YIGA CHUNAVANE MUGIDIDE PAKSHADINDA HORA HODAVARU
VAPASSU BARALI.