
ಬಿಜೆಪಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲ್ಲ
ಚಾಮರಾಜನಗರ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಬಿಜೆಪಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಚಾಮರಾಜನಗರದಲ್ಲಿ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಪ್ರಜಾಧ್ವನಿ ಬಸ್ ಯಾತ್ರೆ ವೇಳೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ. ಸಿ.ಟಿ.ರವಿ ಹಗಲುಗನಸು ಕಾಣುತ್ತಿದ್ದಾರೆ. ಬಿಜೆಪಿ ಯಾವ ಕಾರಣಕ್ಕೂ ಮತ್ತೆ ಅಧಿಕಾರಕ್ಕೆ ಬರಲ್ಲ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.ಆರೋಗ್ಯ ಸಚಿವ ಡಿ.ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೇ 36 ಜನ ಸತ್ತು ಹೋದರು. ಆಕ್ಸಿಜನ್ ಕೊಡದೇ
36 ಜನ ಸತ್ತರೂ ಮೂರೇ ಜನ ಸತ್ತಿದ್ದಾರೆ ಅಂಥ ಹೇಳಿ ಹೋದರು. ಇವರು ಸಚಿವರಾಗಿರಲು ಲಾಯಕ್ಕಾ ಎಂದು ಪ್ರಶ್ನಿಸಿದ ಅವರು ಈ ಸಂಬಂಧ ಸೂಕ್ತ ವಿಚಾರಣೆ ಮಾಡಿಸಿ, ಸಮಿತಿ ರಚನೆ ಮಾಡಿ ವಿಚಾರಣೆ ನಡೆಸಲಿ, ಆಗ ಆರೋಪಗಳೆಲ್ಲ ಸಾಬೀತಾಗುತ್ತದೆ ಎಂದರು.
ನಗರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಸಮಾರಂಭ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಅವರು ಶ್ರೀಚಾಮರಾಜೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಕಾಂಗ್ರೆಸ್ ನಾಯಕರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊರ ಬರುತ್ತಿದ್ದಂತೆ ದೇವಸ್ಥಾನದ ಮುಂಭಾಗ ನೆರೆದಿದ್ದ ಪಕ್ಷದ ಕಾರ್ಯಕರ್ತರು ನಾಯಕರ ಪರ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಮಾಜಿ ಶಾಸಕ ಎಸ್.ಬಾಲರಾಜ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಸೇರಿದಂತೆ ಇತರರಿದ್ದರು.