ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವತಿಯಿಂದ ಉಡುಪಿ ಜಿಲ್ಲೆಗೆ ಉಚಿತ ಆಂಬುಲೆನ್ಸ್ ಸೇವೆ

Spread the love

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವತಿಯಿಂದ ಉಡುಪಿ ಜಿಲ್ಲೆಗೆ ಉಚಿತ ಆಂಬುಲೆನ್ಸ್ ಸೇವೆ

ಉಡುಪಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ರವರು ಉಡುಪಿ ಜಿಲ್ಲಾ ಬಿಜೆಪಿಯ ಜಿಲ್ಲಾ ಕೋವಿಡ್ ಸಹಾಯವಾಣಿಗೆ ಕೊಡಮಾಡಿದ ಅಂಬ್ಯುಲೆನ್ಸ್ ನ್ನು ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಕೋವಿಡ್ ಸಂಬಂಧಿತ ತುರ್ತು ಉಪಯೋಗಕ್ಕಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ರವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಸಂಚಾಲಕ ಶ್ರೀನಿಧಿ ಹೆಗ್ಡೆ ಆತ್ರಾಡಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ವಿನೋದ್ ನಾಯಕ್, ಅಂಬ್ಯುಲೆನ್ಸ್ ಚಾಲಕ ನಿಶಾಂತ್ ಗೌಡ (63615 07676) ಮುಂತಾದವರು ಉಪಸ್ಥಿತರಿದ್ದರು.


Spread the love