ಬಿಜೆಪಿ ಶಾಸಕರ ವಿರುದ್ಧ ದ್ವೇಷ ಸಾಧಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ – ಯಶ್ಪಾಲ್ ಸುವರ್ಣ

Spread the love

ಬಿಜೆಪಿ ಶಾಸಕರ ವಿರುದ್ಧ ದ್ವೇಷ ಸಾಧಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ – ಯಶ್ಪಾಲ್ ಸುವರ್ಣ

ಉಡುಪಿ: ಹಿಂದುತ್ವದ ಭದ್ರಕೋಟೆ ಕರಾವಳಿಯ ಬಿಜೆಪಿ ಶಾಸಕರ ವಿರುದ್ಧ ದ್ವೇಷ ಸಾಧಿಸುತ್ತಿರುವ ರಾಜ್ಯದ ಕಾಂಗ್ರೆಸ್ ಸರಕಾರ ನಡೆ ಖಂಡನೀಯ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರೂ, ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಹರೀಶ್ ಪೂಂಜಾ ಅವರ ಮನೆಗೆ ನುಗ್ಗಿ ಪೊಲೀಸರು ಬಂಧಿಸಲು ಮುಂದಾಗುವ ಮೂಲಕ ಬಿಜೆಪಿ ಶಾಸಕರ ಮಾನಸಿಕ ಸ್ಥೈರ್ಯ ಕುಗ್ಗಿಸಲು ಕಾಂಗ್ರೆಸ್ ಸರ್ಕಾರ ವಿಫಲ ಯತ್ನ ಮಾಡುತ್ತಿದೆ.

ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿನ ದಬ್ಬಾಳಿಕೆಯನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಪೊಲೀಸ್ ಇಲಾಖೆಯ ಮೂಲಕ ಬಿಜೆಪಿ ಕಾರ್ಯಕರ್ತರ ಸ್ಥೈರ್ಯ ಕುಗ್ಗಿಸುವ ತಕ್ಷಣ ಕೈಬಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.


Spread the love

Leave a Reply