ಬಿಜೆಪಿ ಸರ್ಕಾರದ ಕಾಯ್ದೆ ಹಿಂಪಡೆಯಲು ಆಗ್ರಹ

Spread the love

ಬಿಜೆಪಿ ಸರ್ಕಾರದ ಕಾಯ್ದೆ ಹಿಂಪಡೆಯಲು ಆಗ್ರಹ

ಮೈಸೂರು: ರೈತ ವಿರೋಧಿ ಕಾಯ್ದೆಗಳಾದ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಹಾಗೂ ಸಂರಕ್ಷಣಾ ಕಾಯ್ದೆಯನ್ನು ವಾಪಾಸ್ ಪಡೆಯಬೇಕು ಕೇಂದ್ರ ಸರ್ಕಾರ ರೂಪಿಸಿರುವ ವಿದ್ಯುಚಕ್ತಿ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತರಬಾರದು ಎಂದು ನೂತನ ಕಾಂಗ್ರೆಸ್ ಸರ್ಕಾರವನ್ನು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರು ಜಿಲ್ಲೆಯ ಸಿದ್ದರಾಮಯ್ಯನವರು ಸಿಎಂ ಆಗಿರುವುದು ಖುಷಿಯ ವಿಷಯ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರು ರಾಜ್ಯದ ಒಳಿತಿಗಾಗಿ ಕೆಲಸ ಮಾಡಲಿ ಎಂದು ಹೇಳಿದರು.

ಸರ್ವೋದಯ ಕರ್ನಾಟಕ ಪಕ್ಷದಿಂದ ದರ್ಶನ್ ಪುಟ್ಟಣ್ಣಯ್ಯ ಶಾಸಕರಾಗಿ ಆಯ್ಕೆಯಾಗಿರುವುದು ಖುಷಿಯ ವಿಚಾರ.ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನ ನಂಬಿ ಸಂಪೂರ್ಣ ಬಹುಮತ ನೀಡಿದ್ದಾರೆ. ಬಿಜೆಪಿ ಸರ್ಕಾರವನ್ನ ಜನತೆ ಕಿತ್ತೆಸೆದಿದ್ದಾರೆ. ಇದರ ನಡುವೆ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿ. ಡಾ ಸ್ವಾಮಿನಾಥನ್ ವರದಿ ಅನ್ವಯ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ದೊರೆಕಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.


Spread the love

Leave a Reply

Please enter your comment!
Please enter your name here