ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕುಂದಾಪುರ   ನೇತೃತ್ವದಲ್ಲಿ   ರಕ್ತದಾನ ಶಿಬಿರ

Spread the love

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕುಂದಾಪುರ   ನೇತೃತ್ವದಲ್ಲಿ   ರಕ್ತದಾನ ಶಿಬಿರ

ಕುಂದಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಯಶಸ್ವಿ 7 ವರ್ಷ ಪೂರೈಸಿದ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಕುಂದಾಪುರ ವಿಧಾನಸಭಾ ಕ್ಷೇತ್ರ ಇವರ ನೇತೃತ್ವದಲ್ಲಿ ಇಂದು ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು.

ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಕ್ತದಾನ ಶಿಬಿರವನ್ನ ಉದ್ಘಾಟಿಸಿದರು

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ವಿಠ್ಠಲ್ ಪೂಜಾರಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಬಾಣ, ಉಪಾಧ್ಯಕ್ಷ ಸುಧೀರ್ ಕೆಎಸ್, ಒಬಿಸಿ ಕುಂದಾಪುರ ಮಂಡಲ ಅಧ್ಯಕ್ಷ ಸತೀಶ್ ಬಾರಿಕೆರೆ, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಅಂಕದಕಟ್ಟೆ, ಪ್ರಮೋದ್ ಆಚಾರ್, ಕಾರ್ಯದರ್ಶಿ, ದಯಾನಂದ ಖಾರ್ವಿ, ಸಂತೋಷ್ ಮಾರ್ಕೊಡ್, ಸತೀಶ್ ಶೇರಿಗಾರ್ ಹಂಗಳೂರು, ಬಿಜೆಪಿ ಮುಖಂಡರಾದ ರಾಜೇಶ್ ಕಾವೇರಿ, ಸದಾನಂದ ಬಳ್ಕೂರ್, ಸುನಿಲ್ ಶೆಟ್ಟಿ ಹೇರಿಕುದ್ರು, ಸುರೇಂದ್ರ ಸಂಗಮ್, ರತ್ನಾಕರ್ ಚರ್ಚ್ ರೋಡ್, ಪುರಸಭೆ ಸದಸ್ಯರಾದ ಸಂದೀಪ್ ಖಾರ್ವಿ, ಶೇಖರ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.


Spread the love