ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ

Spread the love

ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ

ಮಂಗಳೂರು: ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯ ಒಟ್ಟು 23ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿ ಆಸಾಮಿ ಇಮ್ರಾನ್ @ ಸುರ್ಮೋ ಇಮ್ರಾನ್ನನ್ನು ಉಳ್ಳಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಇಮ್ರಾನ್ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ದರೋಡೆ, ಹಲ್ಲೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ಆತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಪೊಲೀಸರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಬುರ್ಖಾ ಧರಿಸಿಕೊಂಡು ಓಡಾಡುತ್ತಿದ್ದ ಎನ್ನಲಾಗಿದೆ.

ಖಚಿತ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.


Spread the love
Subscribe
Notify of

0 Comments