ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಕಾರ್ಯ; ನಳಿನ್ ಕುಮಾರ್ ಕಟೀಲ್

Spread the love

ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಕಾರ್ಯ; ನಳಿನ್ ಕುಮಾರ್ ಕಟೀಲ್

ಮಂಗಳೂರು: ಭಾರತೀಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸದೃಢಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು.

ಅವರು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೇರೆಬೈಲ್ ನೈರುತ್ಯದ ವಾರ್ಡ್ ನಂಬ್ರ 26 ರಲ್ಲಿ ಬಿಜೆಪಿಯ ಮನೆಮನೆಗೆ ಭೇಟಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ಡಿ ವೇದವ್ಯಾಸ್ ಕಾಮತ್ ಮಾತನಾಡಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಹುಮ್ಮಸ್ಸು ಕಾರ್ಯಕರ್ತರಲ್ಲಿ ಎದ್ದು ಕಾಣುತ್ತಿದೆ ಎಂದರು.

ಮುಖಂಡರಾದ ವಿನಯ್ ಎಲ್ ಶೆಟ್ಟಿ, ವಸಂತ ಜೆ ಪೂಜಾರಿ, ವಾರ್ಡ್ ಅಧ್ಯಕ್ಷ ಅರುಣ್ ದೇರೆಬೈಲ್, ಶಕ್ತಿ ಕೇಂದ್ರದ ಪ್ರಮುಖರಾದ ಸುಧೀರ್, ಕಿಶೋರ್, ಸುಭೋದ್, ಗೀತಾ, ಉಪೇಂದ್ರ, ಸುಬ್ರಹ್ಮಣ್ಯ, ಅಜಿತ್, ರಾಜ್ ಕುಮಾರ್, ಗಣೇಶ್, ಯಾದವ್, ರಾಧಾ, ಜನಾರ್ಧನ ಶೆಟ್ಟಿಯಾರ್ ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು


Spread the love