ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ ಮಾಡಿದ ಸಿಸಿಬಿ ಪೊಲೀಸರು – ಒರ್ವನ ಬಂಧನ

Spread the love

ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ ಮಾಡಿದ ಸಿಸಿಬಿ ಪೊಲೀಸರು – ಒರ್ವನ ಬಂಧನ

ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 23.250 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತ ಆರೋಪಿಯನ್ನು ಕಾಸರಗೋಡು ಮಂಗಲ್ಪಾಡಿ ನಿವಾಸಿ ಮೊಯಿದ್ದೀನ್ ಶಬ್ಬೀರ್ (35) ಎಂದು ಗುರುತಿಸಲಾಗಿದೆ.

ಮೇ 20 ರಂದು ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ ಕೆಯುವಿ 100 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ. ಎ ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ಮುಡಿಪು ಕಾಯರಗೋಳಿ ಕ್ರಾಸ್ ಎಂಬಲ್ಲಿ ಪತ್ತೆ ಹಚ್ಚಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆರೋಪಿಯ ವಶದಲ್ಲಿದ್ದ ಮಹೀಂದ್ರಾ ಕೆಯುವಿ ಸ್ವಾಧೀನಪಡಿಸಿಕೊಂಡು ಅದರಲ್ಲಿ ಸಾಗಾಟ ಮಾಡುತ್ತಿದ್ದ 23.250 ಕೆಜಿ ಗಾಂಜಾವನ್ನು ಮೊಬೈಲ್ ಫೋನ್ ಗಳು-2 ನಗದು ರೂ. 220/- ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ, ಮಹೀಂದ್ರ ಕಾರು ಮತ್ತು ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ ರೂ. 12,96 ,470/- ಆಗಿರುತ್ತದೆ. ಅರೋಪಿಯು ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದರು.

ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಮೊಯಿದ್ದೀನ್, ಶಬೀರ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಜಿಲ್ಲೆಯ ಕಾಸರಗೋಡು, ಮಂಜೇಶ್ವರ, ಕುಂಬ್ಳೆ, ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿ ಕಳ್ಳತನ, ಹಲ್ಲೆ, ಕೊಲೆ ಹೀಗೆ ಒಟ್ಟು 12 ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ, ಆಂಧ್ರಪ್ರದೇಶದಲ್ಲಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಕರಣವೊಂದು ದಾಖಲಾಗಿರುತ್ತದೆ.

ಈ ಬೃಹತ್ ಗಾಂಜಾ ಮಾರಾಟ ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ, ಪೊಲಿಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ ಪಿಎಸ್ಐ ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

 


Spread the love