ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಾಯ!

Spread the love

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಾಯ!

ಬೆಂಗಳೂರು: ನಗರದ ಇಂದಿರಾನಗರದ ಪ್ರಸಿದ್ಧ ಹೊಟೆಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ.

ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಪೋಟವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ ಓಡಿಡಾಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.

ನಿಗೂಢ ಸ್ಫೋಟದ ವೇಳೆ ಭಾರಿ ಪ್ರಮಾಣದ ಶಬ್ಧವಾಗಿದೆ. ಇದರಿಂದ ಜನರು ಒಂದು ಕ್ಷಣ ಭಯಭೀತರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕದಳ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ. ಇನ್ನು ಈ ಸ್ಪೋಟದಲ್ಲಿ 5ಕ್ಕೂ ಹೆಚ್ಚು ಜನರಿಗೆ  ಗಾಯವಾಗಿದೆ.

ಎಸಿಪಿ ರೀನಾ ಸುವರ್ಣ ಮತ್ತು ಮಾರತ್ತಹಳ್ಳಿ ಪೊಲೀಸರು ಸಹ ಸ್ಳಳಕ್ಕೆ ಬಂದಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಹೋಟೆಲ್ನ ಸಿಸಿಟಿವಿಗಳನ್ನು ಸಹ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


Spread the love