ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ

Spread the love

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ
 

ಬೆಂಗಳೂರು: ನಗರದ ನೂತನ ಪೊಲೀಸ್‌ ಆಯುಕ್ತರನ್ನಾಗಿ ಸಿ.ಹೆಚ್‌.ಪ್ರತಾಪ್‌ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗಗಕ್ಕೆ ವರ್ಗಾಯಿಸಲಾಗಿದೆ. ಅಲೋಕ್‌ಕುಮಾರ್ – ಎಡಿಜಿಪಿ , ಕಾನೂನು ಸುವ್ಯವಸ್ಥೆ ಹಾಗೂ ಹಿತೇಂದ್ರ ಆರ್ – ಕೆಎಸ್ ಆರ್ ಪಿ ಎಡಿಜಿಪಿ , ಎಂ ಎನ್ ಅನುಚೇತ್ – ಸಿಐಡಿ ಎಸ್ ಪಿ ಯಾಗಿ ನೇಮಕಗೊಂಡಿದ್ದಾರೆ.

ಐಪಿಎಸ್‌ ಅಧಿಕಾರಿ ಪ್ರತಾಪ್‌ ರೆಡ್ಡಿ ಅವರು ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ ಆಗಿ ನಿಯೋಜಿಸಲಾಗಿದೆ.


Spread the love