ಬೆಂಗಳೂರು: ಪಾರ್ಟಿ ನೆಪದಲ್ಲಿ ಕಾಶ್ಮೀರಿ ಯುವತಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ ಯತ್ನ, ಇಬ್ಬರ ಬಂಧನ!

Spread the love

ಬೆಂಗಳೂರು: ಪಾರ್ಟಿ ನೆಪದಲ್ಲಿ ಕಾಶ್ಮೀರಿ ಯುವತಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ ಯತ್ನ, ಇಬ್ಬರ ಬಂಧನ!

ಬೆಂಗಳೂರು: ಕುಡಿದ ನಶೆಯಲ್ಲಿ ಸ್ನೇಹಿತರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಇಬ್ಬರನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.

ಪಾರ್ಟಿ ನೆಪದಲ್ಲಿ ಕಾಶ್ಮೀರಿ ಮೂಲದ ಸ್ನೇಹಿತೆಯರನ್ನು ಕರೆಸಿಕೊಂಡಿದ್ದ ವಿಶಾಕಪಟ್ಟಣಂ ಮೂಲದ ಅಜಯ್ ಹಾಗೂ ಆತನ ಸ್ನೇಹಿತ ಆದಿತ್ಯ ಎಂಬಾತ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿಯರು ಹಾಗೂ ಆರೋಪಿಗಳು ಒಂದೇ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡಿದ್ದರು. ವಿದ್ಯಾಬ್ಯಾಸ ಮುಗಿದ ನಂತರ ಕಾಶ್ಮೀರಿ ಯುವತಿಯರು ಬೆಂಗಳೂರಿನ ಖಾಸಗಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಬೆಂಗಳೂರಿಗೆ ಬಂದಾಗಲೆಲ್ಲಾ ಅಜಯ್ ಯುವತಿಯರ ಜೊತೆ ಪಾರ್ಟಿ ಮಾಡುತ್ತಿದ್ದರು ಎನ್ನಲಾಗಿದೆ.

ಇನ್ನು ಕುಡಿದ ನಶೆಯಲ್ಲಿ ಅಜಯ್ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದಕ್ಕೆ ಆದಿತ್ಯ ಸಹಕಾರ ನೀಡಿದ್ದ ಎನ್ನಲಾಗಿದೆ. ಇನ್ನು ಈ ಸಂಬಂಧ ಪೊಲೀಸರು ಯುವತಿಯರು ಪೊಲೀಸರಿಗೆ ದೂರು ನೀಡಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.


Spread the love