ಬೆಳಗಾವಿ ನೂತನ ಎಸ್ಪಿಯಾಗಿ ಲಕ್ಷ್ಮಣ್ ನಿಂಬರಗಿ ಅಧಿಕಾರ ಸ್ವೀಕಾರ

ಬೆಳಗಾವಿ ನೂತನ ಎಸ್ಪಿಯಾಗಿ ಲಕ್ಷ್ಮಣ್ ನಿಂಬರಗಿ ಅಧಿಕಾರ ಸ್ವೀಕಾರ

ಬೆಳಗಾವಿ: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಲಕ್ಷ್ಮಣ ನಿಂಬರಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಎಸ್‌ಪಿ ಸುಧೀರಕುಮಾರ್ ರೆಡ್ಡಿ ಅಧಿಕಾರ ಹಸ್ತಾಂತರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ಪಿ ಲಕ್ಷ್ಮಣ ನಿಂಬರಗಿ, ಜಿಲ್ಲೆಯ ಸಮಗ್ರ ಮಾಹಿತಿ ಪಡೆದುಕೊಂಡು ಗಾಂಜಾ, ಮಟ್ಕಾ, ಜೂಜಾಟ, ಅಕ್ರಮ ಮರಳು ದಂಧೆ ಸೇರಿ ಅಕ್ರಮ ಚಟುವಟಿಕೆಗಳನ್ನು ಮಟ್ಟ ಹಾಕಲು ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬೆನಕನಹಳ್ಳಿಯ ಲಕ್ಷ್ಮಣ ನಿಂಬರಗಿ ಹುಬ್ಬಳ್ಳಿಯ ಬಿ.ವಿ.ಭೂಮರೆಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದು, 2014ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ.

ಚಿತ್ರದುರ್ಗ ಎಎಸ್‌ಪಿಯಾಗಿ ವೃತ್ತಿ ಆರಂಭಿಸಿ, ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ, ಬೆಂಗಳೂರಿನ ವೈರಲೆಸ್ ವಿಭಾಗದ ಎಸ್‌ಪಿ ಆಗಿ ಕಾರ್ಯನಿರ್ವಹಿಸಿದ್ದು, ಬಳ್ಳಾರಿಯಿಂದ ಬೆಳಗಾವಿಗೆ ವರ್ಗಾವಣೆಗೊಂಡು ಅಧಿಕಾರ ಸ್ವೀಕರಿಸಿದ್ದಾರೆ. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾ ರಾಮಲಕ್ಷ್ಮಣ ಕರಿಸಿದ್ದಿ ಸೇರಿ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.