ಬೆಳಗಾವಿ: ಯಲ್ಲಮ್ಮನ ಗುಡ್ಡಕ್ಕೆ ಹೊರಟಿದ್ದ ವಾಹನ ಮರಕ್ಕೆ ಡಿಕ್ಕಿ- ಆರು ಜನ ಸಾವು

Spread the love

ಬೆಳಗಾವಿ: ಯಲ್ಲಮ್ಮನ ಗುಡ್ಡಕ್ಕೆ ಹೊರಟಿದ್ದ ವಾಹನ ಮರಕ್ಕೆ ಡಿಕ್ಕಿ- ಆರು ಜನ ಸಾವು
 

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಬಳಿ ಗುರುವಾರ ನಸುಕಿನ ಜಾವ, ಸವದತ್ತಿ ಜಾತ್ರೆಗೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ ಹೊಡೆದು ಆರು ಜನ ಮೃತಪಟ್ಟಿದ್ದು, ಕೆಲವರು ಗಾಯಗೊಂಡಿದ್ದಾರೆ.

ಮೃತಪಟ್ಟವರೆಲ್ಲರೂ ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದವರಾಗಿದ್ದು, ಇಬ್ಬರು ಬಾಲಕಿಯರು, ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಇದ್ದಾರೆ.

ಹಣಮವ್ವ ಮೇಗಾಡಿ (25), ಮಾರುತಿ (42), ಇಂದ್ರವ್ವ (24), ದೀಪಾ (31), ಸವಿತಾ (17), ಸುಪ್ರಿತಾ (11) ಮೃತಪಟ್ಟವರು. ಗಾಯಾಳುಗಳನ್ನು ಗೋಕಾಕ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ನಸುಕಿನ ಜಾವ ಎಲ್ಲರೂ ಗೂಡ್ಸ್‌ ವಾಹನ ಬಾಡಿಗೆ ಮಾಡಿಕೊಂಡು ಯಲ್ಲಮ್ಮನ ಗುಡ್ಡಕ್ಕೆ ರೇಣುಕಾದೇವಿ ಜಾತ್ರೆಗೆ ತೆರಳುತ್ತಿದ್ದರು.

ಗ್ರಾಮದಿಂದ ಹೊರಟ ವಾಹನವು ರಾಮದುರ್ಗ ಮಾರ್ಗವಾಸಾಗಿ, ಚುಂಚನೂರು ಗ್ರಾಮದ ಸರಹದ್ದಿಗೆ ಬಂದಿತ್ತು. ವೇಗವಾಗಿ ಚಲಿಸುತ್ತಿದ್ದ ವಾಃನ ಚುಂಚನೂರು ವಿಠಲಪ್ಪನ ದೇವಸ್ಥಾನದ ಮುದಿನ ಬೃಹತ್‌ ಆಲದ ಮರಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿತು.

ಅಪಘಾತದ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಐವರು ಸ್ಥಳದಲ್ಲೇ ಮೃತಪಟ್ಟರು. ಒಬ್ಬ ಗೋಕಾಕ ತಾಲ್ಲೂಕು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ಮಾರ್ಗದಲ್ಲಿ ದೇವಸ್ಥಾನಕ್ಕೆ ಹೊರಟಿದ್ದ ಇತರ ವಾಹನಗಳ ಸವಾರರು, ಗ್ರಾಮಸ್ಥರು ಸಹಾಯಕ್ಕೆ ಧಾವಿಸಿದರು. ಸ್ಥಳಕ್ಕೆ ಬಂದ ಕಟಕೋಳ ಪೊಲೀಸರೂ ಆಂಬುಲೆನ್ಸ್‌ಗಳನ್ನು ಕರೆಯಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿದರು.


Spread the love

Leave a Reply

Please enter your comment!
Please enter your name here