ಬೆಳ್ಕಲೆ ದೇವಸ್ಥಾನಕ್ಕೆ ನೂತನ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಭೇಟಿ; ಪ್ರಸಾದ ಸ್ವೀಕಾರ

ಬೆಳ್ಕಲೆ ದೇವಸ್ಥಾನಕ್ಕೆ ನೂತನ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಭೇಟಿ; ಪ್ರಸಾದ ಸ್ವೀಕಾರ

ಉಡುಪಿ: ನೂತನವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ನೇಮಕವಾಗಿರುವ ಅಶೋಕ್ ಕುಮಾರ್ ಕೊಡವೂರು ಅವರು ಗುರುವಾರ ತೆಂಕನಿಡಿಯೂರಿನ ಬೆಳ್ಕಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ದೇವಸ್ಥಾನದ ಅರ್ಚಕರಾದ ಶ್ರೀಧರ ಭಟ್ ಅವರು ಅಶೋಕ್ ಕೊಡವೂರು ಅವರಿಗೆ ಪ್ರಸಾದವನ್ನು ನೀಡಿ ಗೌರವಿಸಿದರು.

ಈ ವೇಳೆ ಉಡುಪಿ ಜಿಲ್ಲಾ ಕಾಂಗ್ರೆಸಿನ ಉಪಾದ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಗೋಪಾಲ ಕೃಷ್ಣ ಶೆಟ್ಟಿ, ಕೋಡವೂರು ದೇವಸ್ಥಾನದ ವ್ಯವಸ್ಥಾನ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಕೊಡವೂರು ಹಾಗೂ ಇತರರು ಉಪಸ್ಥಿತರಿದ್ದರು.