
Spread the love
ಬೆಳ್ತಂಗಡಿ: ಕಾರು- ಬೈಕ್ ನಡುವೆ ಅಪಘಾತ – ಸವಾರನಿಗೆ ಗಾಯ
ಬೆಳ್ತಂಗಡಿ: ಇಲ್ಲಿನ ಬದ್ಯಾರ್ ಸಮೀಪ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ಗಾಯಗೊಂಡ ಬೈಕ್ ಸವಾರರ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದ್ದು, ಘಟನೆಯಿಂದ ಕೆಲ ಸಮಯ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸಾರ್ವಜನಿಕರ ಸಹಾಯದಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು
ಗಾಯಗೋಂಡ ಬೈಕ್ ಸವಾರರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Spread the love