ಬೆಳ್ತಂಗಡಿ: ಜಾಗದ ವಿವಾದದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

Spread the love

ಬೆಳ್ತಂಗಡಿ: ಜಾಗದ ವಿವಾದದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

ಬೆಳ್ತಂಗಡಿ: ಜಮೀನು ವಿವಾದಕ್ಕೆ ಸಂಬಂಧಿಸಿ ನೆರೆಹೊರೆಯವರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಇಲ್ಲಿನ ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ.

ಲಾಯಿಲ ಗ್ರಾಮದ ಪುತ್ರಬೈಲು 1 ನೇ ಅಡ್ಡ ರಸ್ತೆಯ ನಿವಾಸಿ ಉಮೇಶ್ (48) ಕೊಲೆಯಾದ ವ್ಯಕ್ತಿ. ಇವರ ನೆರೆಮನೆಯವರಾದ ಯೋಗೀಶ್ ಮತ್ತು ಆತನ ಮಗ ಜೀವನ್ ಕೊಲೆ ಆರೋಪಿಗಳಾಗಿದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈನಲ್ಲಿ ಕೆಲಸದಲ್ಲಿದ್ದ ಉಮೇಶ್ ಸಮಗಾರ ಇತ್ತೀಚೆಗೆ ಊರಿಗೆ ಆಗಮಿಸಿದ್ದರು. ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಎರಡೂ ಕುಟುಂಬಗಳ ಮಧ್ಯೆ ಗಲಾಟೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭ ಯೋಗೀಶ್ ಮತ್ತು ಆತನ ಮಗ ಜೀವನ್ ಸೇರಿ ಉಮೇಶ್ ಗೆ ಮಾರಾಕಾಯುಧಗಳಿಂದ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಗಂಭೀರ ಸ್ವರೂಪದ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಉಮೇಶ್ ರನ್ನು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 2:30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ಬೆಳ್ತಂಗಡಿ ಪೊಲೀಸರು ಆರೋಪಿಗಳಿಬ್ಬರನ್ನು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love