ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿ ಅಪಹರಣ, ಚೂರಿ ಇರಿತ ಪ್ರಕರಣ: ಸುಳ್ಳು ಹೇಳಿಕೆ ಪೊಲೀಸ್ ತನಿಖೆಯಿಂದ ಬಹಿರಂಗ

Spread the love

ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿ ಅಪಹರಣ, ಚೂರಿ ಇರಿತ ಪ್ರಕರಣ: ಸುಳ್ಳು ಹೇಳಿಕೆ ಪೊಲೀಸ್ ತನಿಖೆಯಿಂದ ಬಹಿರಂಗ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ ಹಾಗೂ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ತನಿಖೆಯಲ್ಲಿ ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ.

ಘಟನೆಯ ಕುರಿತು ದಾಖಲಾದ ದೂರಿನ ಆಧಾರದಲ್ಲಿ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ಸಂಶಯಾಸ್ಪದ ವಾಹನ ಕಂಡುಬಂದಿಲ್ಲ. ಇದಲ್ಲದೆ, ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿಗೆ ಉಂಟಾದ ಗಾಯವು ಸ್ವಯಂ ಉಂಟುಮಾಡಿಕೊಂಡ ಗಾಯ (Self Inflicted Wound) ಎಂಬುದು ಪ್ರಾಥಮಿಕವಾಗಿ ದೃಢಪಟ್ಟಿದೆ.

ನಂತರ ಬಾಲಕಿಯ ಹೇಳಿಕೆಯನ್ನು ಮತ್ತೊಮ್ಮೆ ದಾಖಲಿಸಿದ ವೇಳೆ, ಈ ಘಟನೆ ಕುರಿತು ತಾನು ಸುಳ್ಳು ಹೇಳಿಕೆ ನೀಡಿದ್ದಾಗಿ ಬಾಲಕಿ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಅಪ್ರಾಪ್ತೆಯಾಗಿರುವುದರಿಂದ ಆಕೆಯ ಹಿತದೃಷ್ಟಿಯಿಂದ ಪ್ರಕರಣವನ್ನು ಸೂಕ್ಷ್ಮವಾಗಿ ಪರಿಗಣಿಸಲಾಗಿದ್ದು, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಅವರ ಮೂಲಕ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು. ಮುಂದಿನ ಕಾನೂನು ಕ್ರಮವನ್ನು ಈ ಕುರಿತು ನಿರ್ಧರಿಸಲಾಗುವುದಾಗಿದೆ.

ಇದಲ್ಲದೆ, ಅಪ್ರಾಪ್ತೆಗೆ ವಾಹನ ಚಾಲನೆಗೆ ಅವಕಾಶ ನೀಡಿರುವ ಕುರಿತು ಸಂಬಂಧಿಸಿದವರ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.


Spread the love
Subscribe
Notify of

0 Comments
Inline Feedbacks
View all comments