ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯ ಬಂಧನ

Spread the love

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯ ಬಂಧನ
 

ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯೊಬ್ಬನನ್ನು ಬೆಳ್ತಂಗಡಿ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.

ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಸಿರಾಜ್ (28) ಬಂಧಿತ ಆರೋಪಿ. ಗುರುವಾಯನಕೆರೆಯ ಕುವೆಟ್ಟುವಿನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದು, ಪೊಲೀಸರು ಈತನನ್ನು ಬಂಧಿಸಿದ್ದರು.

ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು ಹೊರ ಬಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಈತನ ವಿರುದ್ದ ವಾರೆಂಟ್ ಹೊರಡಿಸಿತ್ತು. ಬೆಳ್ತಂಗಡಿ ಪೊಲೀಸರು ಇದೀಗ ಆರೋಪಿಯನ್ನು ಕಾಸರಗೋಡಿನ ಈತನ ಮನೆಯ ಸಮೀಪದಿಂದ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಇದೀಗ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.


Spread the love