Home Mangalorean News Kannada News ಬೆಳ್ತಂಗಡಿ: ತಾಲೂಕು ಕಚೇರಿ ಸಿಬ್ಬಂದಿ ಹೃದಯಾಘಾತದಿಂದ ಮೃತ್ಯು

ಬೆಳ್ತಂಗಡಿ: ತಾಲೂಕು ಕಚೇರಿ ಸಿಬ್ಬಂದಿ ಹೃದಯಾಘಾತದಿಂದ ಮೃತ್ಯು

Spread the love

ಬೆಳ್ತಂಗಡಿ: ತಾಲೂಕು ಕಚೇರಿ ಸಿಬ್ಬಂದಿ ಹೃದಯಾಘಾತದಿಂದ ಮೃತ್ಯು

ಬೆಳ್ತಂಗಡಿ: ಹೃದಯಾಘಾತದಿಂದ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯಕರಾಗಿದ್ದ ಸತೀಶ್(46) ಮೃತಪಟ್ಟವರು.

ಅವರು ಮಂಗಳವಾರ ಬೆಳಗ್ಗೆ ಲಾಯಿಲದಲ್ಲಿರುವ ತನ್ನ ಮನೆಯಲ್ಲಿ ಸ್ನಾನ ಮಾಡಿ ಬಾತ್ ರೂಮ್ ನಿಂದ ಹೊರಬರುತ್ತಿದ್ದ ವೇಳೆ ಏಕಾಕಿ ಕುಸಿದು ಬಿದ್ದರೆನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ.

ಸತೀಶ್ ಮೂಲತಃ ಹಾಸನ ಜಿಲ್ಲೆಯವರಾಗಿದ್ದು, ಲಾಯಿಲದಲ್ಲಿ ಬಾಡಿಗೆ ಮನೆ ಮಾಡಿ ವಾಸಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಮಗನನ್ನು ಅಗಲಿದ್ದಾರೆ.


Spread the love

Exit mobile version