ಬೆಳ್ತಂಗಡಿ: ಬಸ್ಸಿಗಾಗಿ ಕಾಯುತ್ತಿದ್ದವರಿಗೆ ಲಾರಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು

Spread the love

ಬೆಳ್ತಂಗಡಿ: ಬಸ್ಸಿಗಾಗಿ ಕಾಯುತ್ತಿದ್ದವರಿಗೆ ಲಾರಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ; ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದವರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಜಿರೆ ಸಮೀಪ ರವಿವಾರ ಮಧ್ಯಾಹ್ನ ನಡೆದಿದೆ.

ಮೃತರು ಅಪರಿಚಿತ ಪುರುಷ ಹಾಗೂ ಮಹಿಳೆಯಾಗಿದ್ದಾರೆ. ಅತಿಯಾದ ವೇಗದಲ್ಲಿ ಬಂದ ಲಾರಿ ಬಸ್ಸು ಕಾಯುತ್ತಿದ್ದವರ ಮೇಲೆ ನುಗ್ಗಿದ್ದು ಗಂಭೀರ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಲಾರಿ ಸಮೀಪದ ವಿದ್ಯುತ್ ಕಂಬಗಳಿಗೂ ಢಿಕ್ಕಿ ಹಿಡೆದಿದ್ದು, ನಾಲ್ಕು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ, ಸಮೀಪದ ಕಟ್ಟಡಕ್ಕೂ ಹಾನಿಯುಂಟಾಗಿದೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.


Spread the love