ಬೆಳ್ತಂಗಡಿ : ಭಾರೀ ಪ್ರಮಾಣದ ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ

Spread the love

ಬೆಳ್ತಂಗಡಿ : ಭಾರೀ ಪ್ರಮಾಣದ ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಗೇರುಕಟ್ಟೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಎಂದು ಪೊಲೀಸರು ತಿಳಿಸಿದ್ದಾರೆ.

ಇವರು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಅನುಮಾನಾಸ್ಪದವಾಗಿ ನಿಂತಿರುವುದನ್ನು ನೋಡಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚಾರಣೆ ನಡೆಸಿ ತಪಾಸಣೆ ನಡೆಸಿದಾಗ ಆರೋಪಿಗಳ ಬಳಿಯಿಂದ ಒಟ್ಟು 2.065 ಕೆ.ಜಿ ಗಾಂಜಾ ಪತ್ತೆಯಾಗಿದೆ.

ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ ಸ್ಕೂಟರ್ ಅನ್ನು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ

ಆರೋಪಿಗಳ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದು ಗಾಂಜಾ ಸಾಗಾಟ ಜಾಲವನ್ನು ಪತ್ತೆ ಹಚ್ಚುವ ಪ್ರಯತ್ನದಲ್ಲಿದ್ದಾರೆ.


Spread the love