
Spread the love
ಬೆಳ್ತಂಗಡಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಐವರು ಮಹಿಳೆಯರು ಸೇರಿ 7 ಮಂದಿ ಬಂಧನ
ಬೆಳ್ತಂಗಡಿ: ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಉಜಿರೆಯ ಲಾಡ್ಜ್ ವೊಂದರ ಕುರಿತು ಕಾರ್ಯಕರ್ತರು ನೀಡಿದ ಮಾಹಿತಿ ಆಧರಿಸಿ ಬೆಳ್ತಂಗಡಿ ಪೊಲೀಸರು ಮಂಗಳವಾರ ಸಂಜೆ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಐವರು ಮಹಿಳೆಯರು ಮತ್ತು ಇಬ್ಬರು ಪುರುಷರನ್ನು ವಶಕ್ಕೆ ಪಡೆಯಲಾಗಿದೆ.
ಫೆ.6 ರಂದು ರಾತ್ರಿ ಪೊಲೀಸ್ ವರಿಷ್ಠಾಧಿಕಾರಿ ಅಮಟೆ ವಿಕ್ರಮ್ ಮಾರ್ಗದರ್ಶನದಲ್ಲಿ ಬಂಟ್ವಾಳ ಪೊಲೀಸ್ ಉಪ ವಿಭಾಗದ ಡಿವೈಎಸ್ ಪಿ ಪ್ರತಾಪ್ ಸಿಂಗ್ ಥೋರಟ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಪ್ರಕರಣದ ಕುರಿತು ತನಿಖೆ ಮುಂದುವರೆದಿದೆ.
Spread the love