ಬೈಂದೂರು: ಈಶ್ವರಪ್ಪ ಸಮಾವೇಶಕ್ಕೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ!

Spread the love

ಬೈಂದೂರು: ಈಶ್ವರಪ್ಪ ಸಮಾವೇಶಕ್ಕೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ!

ಬೈಂದೂರು: ಬಿಎಸ್ ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ಧ ತೊಡೆತಟ್ಟಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಸ್ ಈಶ್ವರಪ್ಪ ಅವರು ಬೈಂದೂರಿನ ಉಪ್ಪುಂದದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರಿಗೆ ಹಂಚಲು ಬಿರಿಯಾನಿ ತಯಾರಿಸಲಾಗುತ್ತಿದೆ ಎಂಬ ಮಾಹಿತಿ ಪಡೆದ ಚುನಾವಣಾಧಿಕಾರಿಗಳು ದಾಳಿ ನಡೆಸಿದ ಘಟನೆ ಭಾನುವಾರ ನಡೆದಿದೆ.

ಈಶ್ವರಪ್ಪ ಸಮಾವೇಶದಲ್ಲಿ ಒಂದು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದರು. ಕಾರ್ಯಕರ್ತರಿಗೆ ಮಧ್ಯಾಹ್ನದ ಊಟಕ್ಕೆಂದು ಬಿರಿಯಾನಿ ಕೂಡ ಸಿದ್ಧಪಡಿಸಲಾಗಿತ್ತು. ಆದರೆ, ಸಮಾವೇಶ ನಡೆಯುತ್ತಿದ್ದ ಸಭಾಂಗಣಕ್ಕೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ ನಡೆಸಿದ್ದು, ಬಿರಿಯಾನಿ ಸಪ್ಲೈ ಮಾಡಿದರೆ ಚುನಾವಣೆ ವೆಚ್ಚಕ್ಕೆ ಸೇರ್ಪಡೆಗೊಳಿಸುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಹೀಗಾಗಿ ತಯಾರಿಸುತ್ತಿದ್ದ ಬಿರಿಯಾನಿ ಅಲ್ಲೇ ಬಾಕಿಯಾಗಿದ್ದು, ಬಿರಿಯಾನಿಗಾಗಿ ಕಾದು ಸುಸ್ತಾದ ಕಾರ್ಯಕರ್ತರು, ಬಿರಿಯಾನಿ ತಿನ್ನದೇ ವಾಪಸಾದರು.


Spread the love

Leave a Reply