ಬೈಂದೂರು: ತಿಮಿಂಗಲದ ಅಂಬರ್ ಗ್ರಿಸ್ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸಲು ಯತ್ನಿಸುತ್ತಿದ್ದ ಮೂವರ ಬಂಧನ

Spread the love

ಬೈಂದೂರು: ತಿಮಿಂಗಲದ ಅಂಬರ್ ಗ್ರಿಸ್ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸಲು ಯತ್ನಿಸುತ್ತಿದ್ದ ಮೂವರ ಬಂಧನ

ಕುಂದಾಪುರ: ತಿಮಿಂಗಿಲದ ಅಂಬರ್ ಗ್ರೀಸ್ ಎಂದು ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಶಿವಮೊಗ್ಗ ಗಾಂಧಿ ಬಜಾರ್ ನಿವಾಸಿ ನಿರಂಜನ್ ಎಸ್ (26), ಮಿಲನ್ ಮೊನಿಶ್ ಶೆಟ್ಟಿ (27) ಮತ್ತು ಪ್ರಥ್ವಿ ಡಾಮ್ನಿಕ್ (31) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳು ಜುಲೈ 12 ರಂದು ಬೈಂದೂರು ಯಡ್ತರೆ ಗ್ರಾಮದ ಹೊಸ ಬಸ್ಸು ನಿಲ್ದಾಣದಲ್ಲಿ ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್ ಗ್ರೀಸ್ ಎಂದು ಹೇಳಿ ರೂ 10 ಲಕ್ಷ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದರು.

ಬಂಧಿತರಿಂದ ಸುಮಾರು 3 ಕೆಜಿ 910 ಗ್ರಾಂ ತೂಕದ ತಿಮಿಂಗಿಲದ ಅಂಬರ್ ಗ್ರಿಸ್ ನಂತಿರುವ ವಸ್ತುವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ರೀತಿಯ ಮೇಣದಂತಹ ವಸ್ತುವಿಗೆ ತಿಮಿಂಗಿಲದ ಅಂಬರ್ ಗ್ರಿಸ್ ಎಂದು ಸುಳ್ಳು ಹೇಳಿ ಸಾರ್ವಜನಿಕರನ್ನು ನಂಬಿಸಿ ಮೋಸ ಮಾಡುವ ಜಾಲವು ಸಕ್ರೀಯವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಮತ್ತು ಈ ರೀತಿಯ ಯಾವುದೇ ಆಮಿಷಕ್ಕೆ ಒಳಗಾಗಬಾರದೆಂದು ಮತ್ತು ಈ ರೀತಿಯ ಯಾವುದೇ ಮಾಹಿತಿ ಇದ್ದಲ್ಲಿ ಪೊಲೀಸ್ ಠಾಣೆಗೆ ತಿಳಿಸುವಂತೆ ಕೋರಲಾಗಿದೆ.

ಘಟನೆಯ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.


Spread the love