ಬೈಂದೂರು; ಪ್ರಥಮ ಪಿಯು ಫಲಿತಾಂಶ ಭೀತಿಯಿಂದ ವಿದ್ಯಾರ್ಥಿ ಆತ್ಮಹತ್ಯೆ

Spread the love

ಬೈಂದೂರು; ಪ್ರಥಮ ಪಿಯು ಫಲಿತಾಂಶ ಭೀತಿಯಿಂದ ವಿದ್ಯಾರ್ಥಿ ಆತ್ಮಹತ್ಯೆ
 

ಬೈಂದೂರು : ಪ್ರಥಮ ಪಿಯುಸಿ ಫಲಿತಾಂಶದಿಂದ ಹೆದರಿದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ತಗ್ಗರ್ಸೆ ಎಂಬಲ್ಲಿ ಶನಿವಾರ ನಡೆದಿದೆ.

ತಗ್ಗರ್ಸೆ ಗ್ರಾಮದ ಶೋಭಾ ಶೇರುಗಾರರ ಬಾಡಿಗೆ ಮನೆ ನಿವಾಸಿ ಬೇಬಿ ಶೆಡ್ತಿ ಎಂಬವರ ಮಗ ಸುಧೀಪ್(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಇವರು ಬೈಂದೂರು ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದು, ಎ.30ರ ಪ್ರಥಮ ಪಿಯುಸಿಯ ಫಲಿತಾಂಶದಲ್ಲಿ ತಾನು ಅನುತ್ತೀರ್ಣಗೊಳ್ಳಬಹುದು ಎಂಬ ಹೆದರಿಕೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಅಡುಗೆ ಕೋಣೆಯ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love