ಬೈಂದೂರು: ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಮೃತ್ಯು

Spread the love

ಬೈಂದೂರು: ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಮೃತ್ಯು

ಬೈಂದೂರು: ವಿದ್ಯುತ್ ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿ ಲೈನ್ಮ್ಯಾನ್ ಮೃತಪಟ್ಟ ಘಟನೆ ಸೋಮವಾರ ಬೈಂದೂರಿನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಲೈನ್ ಮ್ಯಾನ್ ಸಲೀಂ (38) ಎಂದು ಗುರುತಿಸಲಾಗಿದೆ. ಇವರು ಮೂಲತಃ ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿದ್ದು ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ.

ಸೋಮವಾರ ಮಧ್ಯಾಹ್ನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಟ್ರಾನ್ಸ್ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.


Spread the love

Leave a Reply