ಬೈಕಾಡಿ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ

Spread the love

 ಬೈಕಾಡಿ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ

ಉಡುಪಿ: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬೈಕಾಡಿ ಬೂತ್ ಮಟ್ಟದ ಗ್ರಾಮ ಪಂಚಾಯತ್ ಕಾರ್ಯಕರ್ತರ ಪೂರ್ವಭಾವಿ ಸಭೆ ಬೈಕಾಡಿ ಪ್ರಭಾಕರ ಶೆಟ್ಟಿಯವರ ಮನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿಯವರ ನೇತೃತ್ವದಲ್ಲಿ ನಡೆಯಿತು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಮಾಜಿ ಜಿಪಂ ಅಧ್ಯಕ್ಷರಾದ ಭುಜಂಗ ಶೆಟ್ಟಿ, ಕಾಂಗ್ರೆಸ್ ನಾಯಕರಾದ ಪ್ರಭಾಕರ ಶೆಟ್ಟಿ, ರಘುರಾಮ ಶೆಟ್ಟಿ, ನಾರಾಯಣ ಶ್ರಿಯಾನ್, ರವಿ ನಾಯಕ್, ಕುಮಾರ್ ಬೈಕಾಡಿ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.


Spread the love