ಬೊಮ್ಮಾಯಿ, ಬಿಎಸ್ ವೈ ನೇತೃತ್ವದಲ್ಲಿ ಚುನಾವಣೆ:ನಡ್ಡಾ

Spread the love

ಬೊಮ್ಮಾಯಿ, ಬಿಎಸ್ ವೈ ನೇತೃತ್ವದಲ್ಲಿ ಚುನಾವಣೆ:ನಡ್ಡಾ

ಹನೂರು: ಮುಖ್ಯ ಮಂತ್ರಿ ಬಸವರಾಜು ಬೊಮ್ಮಾಯಿ ಮತ್ತು ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಈ ಬಾರಿ ವಿಧಾನ ಸಭಾ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತಿಳಿಸಿದರು.

ಹನೂರು ಗೌರಿ ಶಂಕರ ಕಲ್ಯಾಣ ಮಂಟಪ ಸಮೀಪದ ಆವರಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಲಾಗಿದ್ದ ಜನ ಸಂಕಲ್ಪ ಯಾತ್ರೆ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಎಂಟು ಸಾವಿರ ಕಿಮೀ ವಿಜಯ ಸಂಕಲ್ಪ ಯಾತ್ರೆ ನಡೆಯಲಿದ್ದು, ಈ ಬಾರಿ 150 ಸ್ಥಾನಗಳನ್ನು ಬಿಜೆಪಿ ಗೆಲ್ಲುವ ಮೂಲಕ ಕರ್ನಾಟಕದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ. ಮಾದೇಶ್ವರ ಸನ್ನಿಧಿಯಲ್ಲಿ ಕರ್ನಾಟಕ ಸಂಸ್ಕೃತಿ, ಆಚಾರ, ವಿಚಾರ ಎಲ್ಲವೂ ಮಾದರಿಯಾಗಿದೆ. ಈ ಬಾರಿ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ನಿರ್ಮಾಪಕ ನಾಡಪ್ರಭು ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಮೈಸೂರು ಮತ್ತು ಚೆನ್ನೈ ಮಾರ್ಗವಾಗಿ ವಂದೇ ಮಾತರಂ ರೈಲು ಮಾರ್ಗವನ್ನು ಆರಂಭ ಮಾಡಿದ್ದಾರೆ.

ಕರ್ನಾಟಕದಲ್ಲಿ ಪ್ರತಿಯೊಬ್ಬರು ಶಿಕ್ಷಿತರಾಗಿದ್ದಾರೆ. ದೇಶದಲ್ಲಿ 40ರಷ್ಟು ಡಿಜಿಟಲೀಕರಣವನ್ನು ಮೋದಿಯವರು ಮಾಡಿದ್ದಾರೆ. ಶಿವಮೊಗ್ಗದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ವಿಮಾನ ನಿಲ್ದಾಣಗಳನ್ನು ಮಾಡಲು ಮೋದಿಯವರು ಕ್ರಮವಹಿಸಿದ್ದಾರೆ. ಕರ್ನಾಟಕದ ರೈಲ್ವೆ ಇಲಾಖೆಗೆ ಸುಮಾರು 7,000 ಕೋಟಿ ಅನುದಾನವನ್ನು ನೀಡಿ ಅಭಿವೃದ್ಧಿಪಡಿಸಿದ್ದಾರೆ. ಕೇಂದ್ರ ಬಜೆಟ್ ಅಲ್ಲಿ ನಿರ್ಮಲ ಸೀತಾರಂ ಅವರು ರಾಜ್ಯಕ್ಕೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಸಾಕಷ್ಟು ಅನುದಾನವನ್ನು ನೀಡಿದ್ದಾರೆ. ರೈತರು ಮಕ್ಕಳಿಗೆ ವಿದ್ಯಾನಿಧಿ ಮೂಲಕ ಸ್ಕಾಲರ್ಶಿಪ್ ನೀಡಲು 4400 ಕೋಟಿಯನ್ನು ಮೀಸಲಿಟ್ಟಿದ್ದಾರೆ. ಹಿಂದುಳಿದ ವರ್ಗದವರು ಬಡವರು ದೀನದಲಿತರ ಆರ್ಥಿಕವಾಗಿ ಸಬಲರಾಗಲು ಹಲವಾರು ಕಾರ್ಯಕ್ರಮಗಳನ್ನು ಕೇಂದ್ರದ ಮೋದಿಯವರು ನೀಡಿದ್ದಾರೆ ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವ ಮೂಲಕ ಸ್ಪಷ್ಟ ಬಹುಮತ ಬರಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಈ ಬಾರಿ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯನ್ನು 15-20 ಸಾವಿರ ಮತಗಳ ಅಂತರದಿಂದ ಜಯಶೀಲರನ್ನಾಗಿ ಮಾಡಬೇಕು.

ಮುಂದಿನ ದಿನಗಳಲ್ಲಿ 50ಸಾವಿರಕ್ಕೂ ಹೆಚ್ಚು ಕಾರ್ಯಕರ್ತನು ಸೇರಿಸಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ವಿಜಯೇಂದ್ರ ನಾನು ಸಹ ಮತ್ತೊಮ್ಮೆ ಕ್ಷೇತ್ರಕ್ಕೆ ಆಗಮಿಸುತ್ತೇವೆ. ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆಯನ್ನು ನಿಗದಿ ಮಾಡಿದ್ದೇನೆ. ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಿದ್ದೇವೆ. ಸೂರ್ಯ, ಚಂದ್ರ ಎಷ್ಟು ಸತ್ಯವೋ ಅಷ್ಟೇ ಬಿಜೆಪಿ ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಹನೂರು ವಿಧಾನಸಭಾ ಕ್ಷೇತ್ರ ಈಗಾಗಲೇ ಸಮಗ್ರ ಅಭಿವೃದ್ಧಿ ಆಗಬೇಕಾಗಿತ್ತು. ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜನ್ನು ನಾವು ಕೊಟ್ಟಿದ್ದು, ಇಂದಿನ ದುಸ್ಥಿತಿ ನೋಡಿದರೆ ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಆಗಿದೆ. ಹಾಸಿಗೆ, ದಿಂಬಿನಲ್ಲಿ ಭ್ರಷ್ಟಚಾರ, ಬೆಂಗಳೂರು ಬಿಡಿಎ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾಂಗ್ರೆಸ್ ಆ ಭಾಗ್ಯ ಈ ಭಾಗ್ಯ ಕೊಟ್ಟಿವೆಂದು ದೌರ್ಭಾಗ್ಯವನ್ನು ಕೊಟ್ಟಿದೆ ಎಂದು ದೂರಿದರು.

ಮಾಜಿ ಸಚಿವ ಈಶ್ವರಪ್ಪ, ಸಚಿವರಾದ ಸುನೀಲ್ ಕುಮಾರ್, ಅರಗಜ್ಞಾನೇಂದ್ರ, ಗೋಪಾಲಯ್ಯ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎನ್.ಮಹೇಶ್, ನಿರಂಜನ್ ಕುಮಾರ್, ಚಾಮರಾಜನಗರ ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣ್


Spread the love