ಬೋರ್‌ ವೆಲ್ ಕೊರೆಯುತ್ತಿದ್ದ ವೇಳೆ ಭೂಕುಸಿತ; 15 ಅಡಿ ಆಳದಲ್ಲಿ ಸಿಲುಕಿದ್ದ ಯುವಕನ ರಕ್ಷಣೆ

ಬೋರ್‌ ವೆಲ್ ಕೊರೆಯುತ್ತಿದ್ದ ವೇಳೆ ಭೂಕುಸಿತ; 15 ಅಡಿ ಆಳದಲ್ಲಿ ಸಿಲುಕಿದ್ದ ಯುವಕನ ರಕ್ಷಣೆ

ಉಡುಪಿ: ಬೈಂದೂರು ತಾಲೂಕಿನ ಮರವಂತೆಯಲ್ಲಿ ರವಿವಾರ ಮಧ್ಯಾಹ್ನ ಕೊಳೆವೆ ಬಾವಿ ಕೊರೆಯುತ್ತಿದ್ದ ವೇಳೆ ಉಂಟಾದ ಭೂಕುಸಿತದಲ್ಲಿ ಸಿಲುಕಿದ್ದ ಯುವಕನನ್ನು 6 ಗಂಟೆಗಳ ರಕ್ಷಣಾ ಕಾರ್ಯಾಚರಣೆ ನಂತರ ಮೇಲಕ್ಕೆತ್ತಲಾಯಿತು.

ಸ್ಥಳೀಯ ನಿವಾಸಿ ರೋಹಿತ್ ಖಾರ್ವಿ ಭೂ ಕುಸಿತದಿಂದ ಮಣ್ಣಿನಡಿ ಸಿಲುಕಿದ್ದರು.

ಕೊಳವೆಬಾವಿ ಕೊರೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಅದರ ಸುತ್ತ ಭಾರೀ ಆಳಕ್ಕೆ ಭೂಕುಸಿತ ಉಂಟಾಗಿದೆ. ಈ ವೇಳೆ ಸುಮಾರು 15 ಅಡಿಯಷ್ಟು ಮಣ್ಣು ಕುಸಿದಿದ್ದು, ಸ್ಥಳದಲ್ಲಿದ್ದ ರೋಹಿತ್ ಖಾರ್ವಿ ಅದರಲ್ಲಿ ಸಿಲುಕಿಕೊಂಡಿದ್ದರು.