ಬ್ಯಾರಿ ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ

Spread the love

ಬ್ಯಾರಿ ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ

ಬೆಂಗಳೂರು: ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗೌರವ ಪ್ರಶಸ್ತಿ, ಪುರಸ್ಕಾರ ಪ್ರದಾನ ಮತ್ತು ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಅಭಿನಂದನಾ ಸಮಾರಂಭ ಜರುಗಿತು.

ಈ ಸಂದರ್ಭದಲ್ಲಿ 2018, 2019, 2020 ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಗೌರವ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಬ್ಯಾರಿ ಲಿಪಿ ಸಂಶೋಧನಾ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.

ಮುಖ್ಯ ಅತಿಥಿಯಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಭರಣ, ಮಂಗಳೂರು ಶಾಸಕ ಯುಟಿ ಖಾದರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಎಸ್.ರಂಗಪ್ಪ, ಯುವಜಾಗೃತಿ ಬಳಗದ ಅಧ್ಯಕ್ಷೆ ಮತ್ತು ನಟಿ ಪ್ರಾಚೀಗೌಡ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ವಹಿಸಿದ್ದರು.

ಅಕಾಡೆಮಿ ಸದಸ್ಯರಾದ ನಝೀರ್ ಪೊಲ್ಯ, ಸುರೇಖಾ, ರೂಪಶ್ರೀ ವರ್ಕಾಡಿ ಉಪಸ್ಥಿತರಿದ್ದರು.

ರಿಜಿಸ್ಟ್ರಾರ್ ಪೂರ್ಣಿಮಾ ಸ್ವಾಗತಿಸಿದರು. ಅಕಾಡೆಮಿ ಸದಸ್ಯ ಶಂಶೀರ್ ಬುಡೋಳಿ ವಂದಿಸಿದರು. ಮಾಜಿ ಸದಸ್ಯ ಹುಸೇನ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.

ಬ್ಯಾರಿ ಸಂಗೀತ, ಬ್ಯಾರಿ ದಫ್, ಕೋಲ್ಕಲಿ, ಒಪ್ಪನೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


Spread the love