ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ನಗರಸಭೆಗೆ ಯಶ್ಪಾಲ್ ಸುವರ್ಣ ಮನವಿ

Spread the love

ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ನಗರಸಭೆಗೆ ಯಶ್ಪಾಲ್ ಸುವರ್ಣ ಮನವಿ

ಉಡುಪಿ: ಬ್ರಹ್ಮಗಿರಿ ವೃತ್ತದಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಪುತ್ಥಳಿ ನಿರ್ಮಿಸುವಂತೆ ನಗರಸಭೆಗೆ ಬಿಜೆಪಿ ರಾಷ್ಟ್ರೀಯ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯರ್ಶಿ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಉಡುಪಿ ನಗರಸಭೆ ಅಜ್ಜರಕಾಡು ವ್ಯಾಪ್ತಿಯ ಬ್ರಹ್ಮಗಿರಿ ವೃತ್ತದಲ್ಲಿ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿಯಲ್ಲಿ ಹೋರಾಟ ನಡೆಸಿದ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ರವರ ಪುತ್ಥಳಿ ನಿರ್ಮಿಸಿ ವೀರ ಸಾವರ್ಕರ್ ಗೆ ಸಮಸ್ತ ದೇಶಪ್ರೇಮಿಗಳ ಪರವಾಗಿ ಗೌರವ ಸಲ್ಲಿಸಲು ನಿರ್ಧರಿಸಿದ್ದು, ಭಾರತ ಸ್ವಾತಂತ್ರ್ಯಗೊಂಡು 75 ವರ್ಷಗಳನ್ನು ಪೊರೈಸಿರುವ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಕ್ರಾಂತಿಕಾರಿ ಹೋರಾಟದ ಮೂಲಕ ಬ್ರಿಟಿಷರ ಪಾಲಿಗೆ ಸಿಂಹಸ್ವಪ್ನರಾಗಿದ್ದ ವೀರ ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ಅತ್ಯಂತ ಸಮಂಜಸ ಸಮಯ ಬಂದೊದಗಿದ್ದು ತಾವು ನಗರಸಭೆಯ ಮೂಲಕ ಪುತ್ಥಳಿ ಅಳವಡಿಸಲು ಅನುಮತಿ ನೀಡುವಂತೆ ಮನವಿಯಲ್ಲಿ ಕೋರಿದ್ದಾರೆ.


Spread the love

1 Comment

  1. ಕರ್ನಾಟಕದಲ್ಲಿ ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರರು ಯಾರು ಇಲ್ಲವೇ?
    ಇವರು ಉತ್ತರ ಭಾರತದ ಪರಿಸ್ಥಿತಿಯನ್ನು ಕರ್ನಾಟಕದಲ್ಲಿ ಆರಂಭಿಸಲು ಶುರು ಮಾಡಿದ್ದಾರೆ

Comments are closed.