ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದ ಸುಧಾರಣೆಗಾಗಿ ಶ್ರಮಿಸಿದ ದಾರ್ಶನಿಕ- ಅಶೋಕ ಪೂಜಾರಿ ಬೀಜಾಡಿ

Spread the love

ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದ ಸುಧಾರಣೆಗಾಗಿ ಶ್ರಮಿಸಿದ ದಾರ್ಶನಿಕ- ಅಶೋಕ ಪೂಜಾರಿ ಬೀಜಾಡಿ

ಕುಂದಾಪುರ: ಸಮಾಜದಲ್ಲಿ ಬೇರು ಬಿಟ್ಟಿದ್ದ ಅಸ್ಪೃಶ್ಯತೆ, ಶೋಷಣೆ, ಮೂಢನಂಬಿಕೆಯಂತಹ ಅನಿಷ್ಟ ಪದ್ಧತಿಯ ವಿರುದ್ಧ ಸಾಮಾಜಿಕ ಕ್ರಾಂತಿ ಮಾಡಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದ ಅನೇಕ ತೊಡಕುಗಳನ್ನು ಹೋಗಲಾಡಿಸಿ, ಸಮಾಜದ ಸುಧಾರಣೆಗಾಗಿ ಶ್ರಮಿಸಿದ ದಾರ್ಶನಿಕರು ಎಂದು ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಹೇಳಿದರು.

ಇಲ್ಲಿನ ಮಿನಿ ವಿಧಾನಸೌಧದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ಆಶ್ರಯದಲ್ಲಿ ಶನಿವಾರ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಅವರ 168 ನೇ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜದ ನೆಮ್ಮದಿಯನ್ನು ಕಾಡುತ್ತಿದ್ದ ಕೆಲವೊಂದು ಅನಿಷ್ಠ ಪದ್ಧತಿಗಳು ತಾಂಡವವಾಡುತ್ತಿದ್ದಾಗ ಜನಿಸಿದ್ದ ಶ್ರೀ ನಾರಾಯಣ ಗುರುಗಳು, ಜಾತಿ-ವೈಷಮ್ಯ ಎಂಬ ಅಜ್ಞಾನವನ್ನು ತೊಡೆಯಲು ಶಿಕ್ಷಣದ ಮೂಲಕ ಸಾಮಾಜಿಕ ಕ್ರಾಂತಿಯ ಸಂದೇಶವನ್ನು ಸಾರಿದ್ದರು. ಶೋಷಿತ ಮತ್ತು ಹಿಂದುಳಿದ ವರ್ಗಗಳಿಗೆ ಸಾಮಾಜಿಕ ಸಮಾನತೆಯನ್ನು ದೊರಕಿಸಿಕೊಟ್ಟ ಮಹಾನ್ ಸಂತರು ಅವರು ಎಂದರು.

ಕುಂದಾಪುರ ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಅವರು ನಾರಾಯಣ ಗುರುಗಳ ಭಾವ ಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೆಕರ್, ಬಿಲ್ಲವ ಸಮಾಜದ ಪ್ರಮುಖರಾದ ಮಂಜು ಬಿಲ್ಲವ, ರಾಜು ಪೂಜಾರಿ ಜಡ್ಕಲ್ ಮಾತನಾಡಿದರು.

ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್ ಕೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಎನ್, ಉಪ ತಹಶೀಲ್ದಾರ್ ಚಂದ್ರಶೇಖರ್, ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯದರ್ಶಿ ಗಣೇಶ್ ವಿಠಲವಾಡಿ, ಉಪಾಧ್ಯಕ್ಷ ಭಾಸ್ಕರ ಬಿಲ್ಲವ, ಮಹಿಳಾ ಘಟಕಾಧ್ಯಕ್ಷೆ ಸುಮನಾ ಬಿದ್ಕಲ್‌ಕಟ್ಟೆ, ಹೇಮಾವತಿ, ಜಾನಕಿ ಬಿಲ್ಲವ, ಶೈಕ್ಷಣಿಕ ಹಾಗೂ ದತ್ತಿ ಸಂಸ್ಥೆಯ ಕಾರ್ಯದರ್ಶಿ ಭಾಸ್ಕರ ವಿಠಲವಾಡಿ, ನಾರಾಯಣ ಗುರು ಯುವಕ ಮಂಡಲದ ಅಧ್ಯಕ್ಷ ಅಜಿತ್, ಪ್ರಮುಖರಾದ ದಿವಾಕರ ಕಡ್ಗಿಮನೆ, ರಾಜೇಶ್ ಕಡ್ಗಿಮನೆ, ಆನಂದ ಕೊಡೇರಿ, ಯೋಗೀಶ್ ಕೋಡಿ ಇದ್ದರು. ಉಪ ತಹಶೀಲ್ದಾರ್ ವಿನಯ್ ಸ್ವಾಗತಿಸಿದರು.


Spread the love

Leave a Reply

Please enter your comment!
Please enter your name here