ಬ್ರಹ್ಮಾವರ : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಡಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

Spread the love

ಬ್ರಹ್ಮಾವರ : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಡಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

ಬ್ರಹ್ಮಾವರ : ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ ವಿದ್ಯುತ್ ತಂತಿ ಕಡಿದು ಬಿದ್ದ ಸ್ಪರ್ಶಿಸಿದ ಪರಿಣಾಮ ವೃದ್ಧ ಕೃಷಿಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ಸಮೀಪದ ಚೇರ್ಕಾಡಿಯಲ್ಲಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಬ್ರಹ್ಮಾವರ ಚೇರ್ಕಾಡಿ ನಿವಾಸಿ ಸಾಧು (72) ಎಂದು ಗುರುತಿಸಲಾಗಿದೆ.

ಗುರುವಾರ ಸಾಧು ಅವರು ಗದ್ದೆಯಲ್ಲಿ ಕೃಷಿ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಗದ್ದೆಯ ಮಧ್ಯೆ ಹಾದು ಹೋದ ವಿದ್ಯುತ್ ತಂತಿ ಕಡಿದು ಬಿದ್ದಿದ್ದು ಇದನ್ನು ಗಮನಿಸದೆ ಸಾಧು ಅವರು ಸ್ಪರ್ಶಿಸಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love