ಬ್ರಹ್ಮಾವರ ಠಾಣಾಧಿಕಾರಿ ಮಧು ಬಿ.ಇ ಅವರಿಗೆ ಮುಖ್ಯಮಂತ್ರಿ ಪದಕ

Spread the love

ಬ್ರಹ್ಮಾವರ ಠಾಣಾಧಿಕಾರಿ ಮಧು ಬಿ.ಇ ಅವರಿಗೆ ಮುಖ್ಯಮಂತ್ರಿ ಪದಕ

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮಧು ಬಿ.ಇ 2023 ನೇ ಸಾಲಿನ ಮುಖ್ಯಮಂತ್ರಿ ಪದಕ ಪಡೆದ ಗೌರವಕ್ಕೆ ಭಾಜನರಾಗಿದ್ದಾರೆ.

2016 ರಲ್ಲಿ ತರಬೇತಿ ಪಡೆದು 2017 ರಿಂದ ಪೊಲೀಸ್ ಇಲಾಖೆಗೆ ಸೇರಿದ ಇವರು ಉಡುಪಿ ಜಿಲ್ಲೆಯ ಮಲ್ಪೆ, ಕಾರ್ಕಳ, ಕೋಟ, ಶಂಕರನಾರಾಯಣ ಮತ್ತು ಪ್ರಸ್ತುತ ಬ್ರಹ್ಮಾವರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಲಾಖೆಯಲ್ಲಿ ಸಲ್ಲಿಸಿದ ಉತ್ತಮ ಸೇವೆಗೆ ಈ ಪದಕ‌ ಲಭಿಸಿದೆ.

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಾಜ್ಯದ 126 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ


Spread the love
Subscribe
Notify of

0 Comments
Inline Feedbacks
View all comments