ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರಭಾಕರ ಆಚಾರ್ಯ, ಕಾರ್ಯದರ್ಶಿ ರಾಜೇಶ್ ಅಚ್ಲಾಡಿ ಆಯ್ಕೆ

Spread the love

ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರಭಾಕರ ಆಚಾರ್ಯ, ಕಾರ್ಯದರ್ಶಿ ರಾಜೇಶ್ ಅಚ್ಲಾಡಿ ಆಯ್ಕೆ
ಬ್ರಹ್ಮಾವರ : ಬ್ರಹ್ಮಾವರ ತಾಲೂಕು ಆಗಿ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಬ್ರಹ್ಮಾವರ ವಲಯದ ಕಾರ್ಯನಿರತ ಪತ್ರಕರ್ತರ ಸಂಘವನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವನ್ನಾಗಿ ಜಿಲ್ಲಾ ಸಂಘದ ಅಧ್ಯಕ್ಷ ಶ್ರೀ ಗಣೇಶ್ ಪ್ರಸಾದ್ ಘೋಷಣೆ ಮಾಡಿದರು.

ಜೂನ್-14ರಂದು ಬ್ರಹ್ಮಾವರ ಪ್ರೆಸ್ ಕ್ಲಬ್‍ನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು.

ಇದೇ ಸಂದರ್ಭ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಚಿತ್ತೂರು ಪ್ರಭಾಕರ ಆಚಾರ್ಯ, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಗಾಣಿಗ ಅಚ್ಲಾಡಿ, ಉಪಾಧ್ಯಕ್ಷರಾಗಿ ಚಂದ್ರಶೇಖರ ಬೀಜಾಡಿ, ಶೇಷಗಿರಿ ಭಟ್, ಖಜಾಂಚಿಯಾಗಿ ಮೋಹನ್ ಉಡುಪ, ಜೊತೆ ಕಾರ್ಯದರ್ಶಿಯಾಗಿ ಕೆ.ಜಿ.ವೈದ್ಯ ಕೋಟೇಶ್ವರ, ಸಾಂಸ್ಕøತಿಕಾ ಕಾರ್ಯದರ್ಶಿಯಾಗಿ ಶಿವರಾಮ ಆಚಾರ್ಯ ಬಂಡಿಮಠ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರವೀಣ್ ಮುದ್ದೂರು ಹಾಗೂ ವಡ್ಡರ್ಸೆ ಪತ್ರಿಕೋದ್ಯಮ ಪ್ರಶಸ್ತಿ ಸಂಚಾಲಕರಾಗಿ ವಸಂತ ಗಿಳಿಯಾರ್ ಆಯ್ಕೆಯಾದರು.

ಜಿಲ್ಲಾ ಸಂಘದ ಪ್ರದಾನ ಕಾರ್ಯದರ್ಶಿ ಸಂತೋಷ ಸರಳೇಬೆಟ್ಟು, ಕೋಶಾಧಿಕಾರಿ ದಿವಾಕರ ಹಿರಿಯಡಕ, ಜೊತೆ ಕಾರ್ಯದರ್ಶಿ ಮೈಕಲ್ ರೋಡ್ರಿಗಸ್ ಹಾಗೂ ಗಣೇಶ್ ಸಾೈಬ್ರಕಟ್ಟೆ ಉಪಸ್ಥಿತರಿದ್ದರು. ರಾಜೇಶ್ ಗಾಣಿಗ ಅಚ್ಲಾಡಿ ಸ್ವಾಗತಿಸಿ, ಚಿತ್ತೂರು ಪ್ರಭಾಕರ ಆಚಾರ್ಯ ವಂದಿಸಿದರು.


Spread the love