ಬ್ರಹ್ಮಾವರ ಪ್ರೆಸ್ ಕ್ಲಬ್ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟನೆ
ಬ್ರಹ್ಮಾವರ : ನಾನು ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಪತ್ರಕರ್ತರ ಜತೆ ಒಡನಾಟ ಮಾಡಿದ್ದೇನೆ. ಆದರೆ ಉಡುಪಿ ಜಿಲ್ಲೆಯಷ್ಟು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಪತ್ರಕರ್ತರನ್ನು ಎಲ್ಲಿಯೂ ನೋಡಿಲ್ಲ ಎಂದು ಮೀನುಗಾರಿಕೆ, ಯುವಜನ ಸಬಲೀಕರಣ, ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಅವರು ಬ್ರಹ್ಮಾವರದ ವಾರಂಬಳ್ಳಿ ಗ್ರಾ.ಪಂ. ಆವರಣದಲ್ಲಿ ಸೋಮವಾರ ಉದ್ಘಾಟನೆಗೊಂಡ ಬ್ರಹ್ಮಾವರ ಪ್ರೆಸ್ ಕ್ಲಬ್ ನ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.
ಬ್ರಹ್ಮಾವರ ಪ್ರೆಸ್ ಕ್ಲಬ್ಗೆ ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡ ನಿರ್ಮಿಸಲು ಜಾಗವನ್ನು ಹಾಗೂ ಬೇಕಾಗುವ ಎಲ್ಲ ಸೌಲಭ್ಯಗಳನ್ನು ನೀಡಲು ಪ್ರಯತ್ನಿಸುವುದಾಗಿ ಹೇಳಿದರು.
ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಮಾತನಾಡಿ, ಇಂದು ಎಲ್ಲರು ಪತ್ರಿಕೆಯನ್ನು ಅವಲಂಭಿರಾಗಿರುವ ಕಾಲ. ಜನಮಾನಸಕ್ಕೆ ಹತ್ತಿರವಾಗಿ ಸಮಾಜದ ಒಳಿತನ್ನು ಪತ್ರಿಕೆ ಕೊಡುತ್ತಿದೆ ಎಂದರು.
ಬ್ರಹ್ಮಾವರ ಪ್ರೆಸ್ ಕ್ಲಬ್ನ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಉಪಾಧ್ಯಕ್ಷ ಜಯರಾಮ್ ಶೆಟ್ಟಿ, ವಾರಂಬಳ್ಳಿ ಗ್ರಾ.ಪಂ. ಅಧ್ಯಕ್ಷ ನವೀನ್ಚಂದ್ರ ನಾಯಕ್, ಮಾಜಿ ಅಧ್ಯಕ್ಷ ನಿತ್ಯಾನಂದ ಬಿ.ಆರ್ ಉಪಸ್ಥಿತರಿದ್ದರು.
ಈ ಸಂದರ್ಭ ಪ್ರೆಸ್ ಕ್ಲಬ್ ವತಿಯಿಂದ ಸಚಿವರನ್ನು ಗೌರವಿಸಲಾಯಿತು.
ಕ್ಲಬ್ನ ಸದಸ್ಯ ಕೆ.ಜಿ.ವೈದ್ಯ ಸ್ವಾಗತಿಸಿ, ಕಾರ್ಯದರ್ಶಿ ರಾಜೇಶ್ ಅಚ್ಲಾಡಿ ಕಾರ್ಯಕ್ರಮ ನಿರೂಪಿಸಿ, ವಸಂತ ಗಿಳಿಯಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಗಣೇಶ್ ಸಾಯಿಬ್ರಕಟ್ಟೆ ವಂದಿಸಿದರು.