ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ್ ಭಂಡಾರಿ ಭೇಟಿ

Spread the love

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ್ ಭಂಡಾರಿ ಭೇಟಿ

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ಮಂಜುನಾಥ್ ಭಂಡಾರಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಗೆ ಭೇಟಿ ನೀಡಿ ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು ಪ್ರತಿಯೊಬ್ಬ ನಾಯಕರು ಮಂಚೂಣಿ ಕಾರ್ಯಕರ್ತರು ಹಾಗೂ ಅವರ ಬೂತ ಮಟ್ಟದಲ್ಲಿ ಹೆಚ್ಚಿನ ಮತವನ್ನು ಗಳಿಸಿದಾಗ ಮಾತ್ರ ಪಕ್ಷ ಬಲಗೊಳ್ಳಲು ಸಾಧ್ಯವಾಗುತ್ತದೆ. ಇದು ಪ್ರತಿಯೊಬ್ಬ ಕಾರ್ಯಕರ್ತನ ಕರ್ತವ್ಯವಾಗಿದೆ. ಡಿಕೆ ಶಿವಕುಮಾರ್ ಅವರ ನೂತನ ಕಾರ್ಯಕ್ರಮಗಳನ್ನು ಎಲ್ಲರನ್ನೂ ಒಟ್ಟುಗೂಡಿ ಒಗ್ಗಟ್ಟಾಗಿ ಸರಿಯಾಗಿ ಅಳವಡಿಸಿಕೊಂಡಾಗ, ಕಾಂಗ್ರೆಸ್ ಕಾರ್ಯಕರ್ರತರು ಬೂಟತ ್ಮಟ್ಟದಲ್ಲಿ, ಗ್ರಾಮ ಮಟ್ಟದಲ್ಲಿ ಪಕ್ಷ ಬಲಗೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ವಹಿಸಿದ್ದರು. ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಯಕ್ರಮಗಳ ವಿವರವನ್ನು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮತ್ತು ಬ್ರಹ್ಮಾವರ ಬ್ಲಾಕ್ ಉಸ್ತುವಾರಿ ಪ್ರಖ್ಯಾತ್ ಶೆಟ್ಟಿ ನೀಡಿದರು.

ಸಭೆಯಲ್ಲಿ ಮಾಜಿ ಶಾಸಕ ಯು ಆರ್ ಸಭಾಪತಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್, ನಾಯಕರುಗಳಾದ ವೆರೋನಿಕಾ ಕರ್ನೆಲಿಯೊ, ದಿನೇಶ್ ಪುತ್ರನ್, ಮುರಳಿ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಯತೀಶ್ ಕರ್ಕೇರಾ, ರೆಹಮುತುಲ್ಲಾ, ಅಣ್ಣಯ್ಯ ಸೇರಿಗಾರ್, ರಾಘವೇಂದ್ರ ಶೆಟ್ಟಿ, ಡಾ ಸುನೀತಾ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಸ್ವಾಗತಿಸಿ ರಮೇಶ್ ಕರ್ಕೇರಾ ವಂದಿಸಿದರು.


Spread the love