ಬ್ರಹ್ಮಾವರ: ಮದುವೆಗೆ ನಿರಾಕರಿಸಿದ ಯುವತಿಗೆ ಚೂರಿ ಇರಿದ ಯುವಕ: ಯುವತಿ ಗಂಭೀರ
ಉಡುಪಿ: ಮದುವೆಗೆ ನಿರಾಕರಿಸಿದ ಕ್ಕೆ ಯುವತಿಗೆ ಯುವಕ ಚೂರಿ ಇರಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರಣೆಯಲ್ಲಿ ನಡೆದಿದೆ.
ಆರೋಪಿ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಾಳೆ. ಮಾತಿಗೆ ಮಾತು ಬೆಳೆದು ಜಗಳವಾಗಿ ಯುವಕ ಸ್ಥಳದಲ್ಲೇ ಚಾಕುವಿನಿಂದ ಇರಿದಿದ್ದಾನೆ.
ಯುವತಿ ರಕ್ಷಿತಾ (24) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿ ಕುಸಿದು ಬಿದ್ದಿದ್ದಾಳೆ ಜೀವನ್ಮರಣ ಹೋರಾಟದಲ್ಲಿದ್ದ ಯುವತಿಯನ್ನ ಮಣಿಪಾಲ ಕಸ್ತೂರ್ ಬಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಯುವಕ ಯುವತಿಯನ್ನು ಪ್ರೀತಿಸುತ್ತಿದ್ದು ಮದುವೆ ಆಗಬೇಕು ಎಂದು ಬಹಳ ಸಮಯದಿಂದ ಒತ್ತಾಯಿಸುತ್ತಿದ್ದ. ಆಕೆ ಆಕೆಯ ಮನೆಯವರು ಇದಕ್ಕೆ ಒಪ್ಪದಂತಹ ಹಿನ್ನೆಲೆಯಲ್ಲಿ ಇಬ್ಬರಿಗೆ ಜಗಳ ನಡೆಯುತ್ತಿತ್ತು. ಕುತ್ತಿಗೆಗೆ ಚಾಕು ಇರಿದು ಕೊಲೆಗೈಯ್ಯಲು ಯುವಕ ಯತ್ನಿಸಿದ್ದಾನೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೆಚ್ಚಿನ ಮಾಹಿತಿ ನೀಡುವುದಾಗಿ ಉಡುಪಿ ಎಸ್ ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.