Home Mangalorean News Kannada News ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Spread the love

ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಬ್ರಹ್ಮಾವರ: ಇಲ್ಲಿನ ಮೆಸ್ಕಾಂ ಸಹಾಯಕ ಇಂಜಿನಿಯರ್ ಒಬ್ಬರು ತಮ್ಮ ಕಚೇರಿಯಲ್ಲಿ 20 ಸಾವಿರ ರೂ. ಲಂಚದ ಹಣ ಪಡೆಯುತ್ತಿದ್ದಾಗಲೇ ಶುಕ್ರವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬಂಧಿತ ಆರೋಪಿಯನ್ನು ಬ್ರಹ್ಮಾವರ ಮೆಸ್ಕಾಂನ ಸಹಾಯಕ ಇಂಜಿನಿಯರ್ ಅಶೋಕ್ ಪೂಜಾರಿ (46) ಎಂದು ಗುರುತಿಸಲಾಗಿದೆ.

ಇವರು ದಿನೇಶ್ ಪೂಜಾರಿ ಎಂಬವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕಳೆದ ತಿಂಗಳು ಸ್ಥಳ ಪರಿಶೀಲನೆ ನಡೆಸಿದ್ದರು. ನಂತರ ₹ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಲಂಚ ನೀಡಲು ಒಪ್ಪದ ದಿನೇಶ್ ಲೋಕಾಯುಕ್ತ ಗಮನಕ್ಕೆ ಇದನ್ನು ತಂದಿದ್ದರು.

ಶುಕ್ರವಾರ ಬೆಳಗ್ಗೆ ಲಂಚ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೋಲಿಸರು ದಾಳಿ ನಡೆಸಿ, ನಗದು ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.

ಲೋಕಾಯುಕ್ತ ಎಸ್ಪಿ ಕುಮಾರ್ಚಂದ್ರ ಅವರ ನೇತೃತ್ವದಲ್ಲಿ, ಡಿವೈಎಸ್ಪಿ ಮಂಜುನಾಥ್, ಭಾರತಿ, ರಾಜೇಂದ್ರ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.


Spread the love

Exit mobile version