ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಸತೀಶ್ ಕಿಣಿ, ಉಪಾಧ್ಯಕ್ಷರಾಗಿ ಸಂಜೀವ ಶೆಟ್ಟಿ ಆಯ್ಕೆ
ಬ್ರಹ್ಮಾವರ: ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆ (ನಿ.) ಬ್ರಹ್ಮಾವರ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ರೈತ ಸಂಘದ ಕಾರ್ಯದರ್ಶಿ ಸತೀಶ್ ಕಿಣಿ, ಉಪಾಧ್ಯಕ್ಷರಾಗಿ ಸಂಪಿಗೇಡಿ ಸಂಜೀವ ಶೆಟ್ಟಿಯವರು ಆಯ್ಕೆಯಾಗಿರುತ್ತಾರೆ.
ಅ.29ರಂದು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಕಿಣಿ, ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಂಪಿಗೇಡಿ ಸಂಜೀವ ಶೆಟ್ಟಿಯವರು ಮಾತ್ರ ನಾಮ ಪತ್ರ ಸಲ್ಲಿಸಿದ್ದು ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಸಹಕಾರ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಘೋಷಿಸಿದರು.
ಈ ಸಂದರ್ಭ ನಿರ್ದೇಶಕರಾದ ಭುಜಂಗ ಶೆಟ್ಟಿ ಬ್ರಹ್ಮಾವರ, ಕೆದೂರು ಸದಾನಂದ ಶೆಟ್ಟಿ, ಎಚ್.ಹರಿಪ್ರಸಾದ್ ಶೆಟ್ಟಿ, ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು ವಂಡ್ಸೆ, ಶ್ರೀಮತಿ ಚೈತ್ರ ವಿ.ಅಡಪ ಮೊಳಹಳ್ಳಿ, ನ್ಯಾಯವಾದಿ ಟಿ. ಮಂಜುನಾಥ್ ಗಿಳಿಯಾರು, ರಂಗ ನಾಯ್ಕ್ ಜಡ್ಕಲ್, ಶಿವರಾಮ ಹಾಗೂ ಭೋಜ ಕುಲಾಲ್ ಉಪಸ್ಥಿತರಿದ್ದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಕುಂದಾಪುರ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ರೈತ ಸಂಘದ ಪ್ರಮುಖರು, ಸದಸ್ಯರು ಆಗಮಿಸಿ ನೂತನ ಅಧ್ಯಕ್ಷರು ಉಪಾಧ್ಯಕ್ಷರನ್ನು ಅಭಿನಂದಿಸಿದರು. ಸಕ್ಕರೆ ಕಾರ್ಖಾನೆಯ ಶ್ರೀ ಗೋಪಾಲಕೃಷ್ಣ ಶೆಟ್ಟಿ ವಂದಿಸಿದರು.