ಬ್ರಹ್ಮಾವರ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಕಂಟೈನರ್ ಮನೆ ಉದ್ಘಾಟನೆ

Spread the love

ಬ್ರಹ್ಮಾವರ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಕಂಟೈನರ್ ಮನೆ ಉದ್ಘಾಟನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಪ.ಜಾತಿ ಮತ್ತು ಪಂಗಡದ ಅಲೆಮಾರಿ ಅಭಿವೃಧ್ದಿ ನಿಗಮ ಹಾಗೂ ಚೇರ್ಕಾಡಿ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಚೇರ್ಕಾಡಿಯ ಮೈತಗುಲಿಯಲ್ಲಿ, ಕಂಟೈನರ್ ಮನೆ ಉದ್ಘಾಟನೆ ಹಾಗೂ ಸವಲತ್ತು ವಿತರಣೆ ಕಾರ್ಯಕ್ರಮವನ್ನು, ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು , ಬಡವರ್ಗದ ಜನತೆಗೆ ಇಂತಹ ಕಂಟೈನರ್ ಮನೆಗಳು ಅತ್ಯಂತ ಹೆಚ್ಚು ಪ್ರಯೋಜನಕಾರಿಯಾಗಿದ್ದು, ಈ ಮನೆ ನಿರ್ಮಾಣದ ವೆಚ್ಚವೂ ಸಹ ಕಡಿಮೆಯಾಗಲಿದ್ದು, 6 ಲಕ್ಷ ರೂ ವೆಚ್ಚದಲ್ಲಿ ಈ ಮನೆ ನಿರ್ಮಾಣಗೊಳ್ಳಲಿದ್ದು, ಅರ್ಹ ಬಡ ಜನತೆಯನ್ನು ಗುರುತಿಸಿ , ಇಲಾಖೆವತಿಯಿಂದ ಇಂತಹ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಖಾ ಭಟ್, ಆರೂರು ಗ್ರಾ.ಪಂ. ಅಧ್ಯಕ್ಷೆ ಮಮತಾ ಶೆಟ್ಟಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಬ್ರಹ್ಮಾವರ ತಹಸೀಲ್ದಾರ್ ರಾಜಶೇಖರ ಮೂರ್ತಿ , ಬ್ರಹ್ಮಾವರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಇಬ್ರಾಹಿಂಪುರ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್ , ಮತ್ತಿತರರು ಉಪಸ್ಥಿತರಿದ್ದರು.


Spread the love